ವಾಷಿಂಗ್ಟನ್: ಸಂಶೋಧಕ ಹಾಗೂ ಸಾಹಿತಿ ಎಂ.ಎಂ. ಕಲಬುರ್ಗಿ, ಎಡಪಂಥೀಯ ವಿಚಾರವಾದಿ ಗೋವಿಂದ ಪಾನ್ಸರೆ ಅವರ ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಅಲ್ಲದೇ ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಆರೋಪಿಸಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಭಾರತೀಯ ಸಾಹಿತಿಗಳು ಹಾಗೂ ಕಲಾವಿದರಿಗೆ ವಿಶ್ವದಾದ್ಯಂತ 150 ರಾಷ್ಟ್ರಗಳ ಲೇಖಕರಿಂದ ಬೆಂಬಲ ವ್ಯಕ್ತವಾಗಿದೆ.
ಸಾಹಿತಿಗಳ ಸಾಹಿತ್ಯವನ್ನು ಪ್ರೋತ್ಸಾಹಿಸಿ, ವಾಕ್ ಸಾಮರ್ಥ್ಯವನ್ನು ಸಮರ್ಥಿಸಿಕೊಳ್ಳಬೇಕೆಂದು ಜಾಗತಿಕ ಲೇಖಕರ ಮುಂಚೂಣಿ ಸಂಘಟನೆ ’ಪೆನ್ ಇಂಟರ್ನ್ಯಾಷನಲ್’ ಒತ್ತಾಯಿಸಿದೆ. ಲೇಖಕರು ಹಾಗೂ ಕಲಾವಿದರು ಸೇರಿದಂತೆ ಪ್ರತಿಯೊಬ್ಬರ ಹಕ್ಕುಗಳನ್ನು ರಕ್ಷಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಘಟನೆಯ ಅಧ್ಯಕ್ಷ ಜಾನ್ ರಾಲ್ಸ್ಟನ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಾಹಿತ್ಯ ಅಕಾಡೆಮಿಗೆ ಪತ್ರ ಬರೆದಿದ್ದಾರೆ.
ಕೆನಡಾದ ಕ್ಯೂಬಿಕ್ ಸಿಟಿಯಲ್ಲಿ ನಡೆದ ‘ಪೆನ್ ಇಂಟರ್ನ್ಯಾಷನಲ್’ನ 81ನೇ ಸಮ್ಮೇಳನದಲ್ಲಿ 150 ರಾಷ್ಟ್ರಗಳ ಲೇಖಕರು ವಿಚಾರವಾದಿ ಎಂ.ಎಂ. ಕಲಬುರ್ಗಿ ಅವರ ಹತ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಬೆಂಬಲಕ್ಕೆ ಮುಂದಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.