ಹೊಸಪೇಟೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸ್ತುತ ಕರ್ನಾಟಕ ಪ್ರವಾಸದಲ್ಲಿದ್ದಾರೆ. ನಿನ್ನೆ ಸಂಜೆ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಶಾಸಕ ಅರವಿಂದ್ ಬೆಲ್ಲದ್ ಅವರು ಸ್ವಾಗತಿಸಿದರು.
ಬುಧವಾರ ಬೆಳಿಗ್ಗೆ ಅವರು ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ತೆರಳಿ ಶ್ರೀ ದೇವರ ದರ್ಶನ ಮಾಡಿದರು.
ಹಂಪಿಯ ಆನೆ ಲಕ್ಷ್ಮಿಯಿಂದ ಆಶೀರ್ವಾದವನ್ನೂ ಪಡೆದುಕೊಂಡರು.
ಈ ಸಂದರ್ಭದಲ್ಲಿ ಅವರೊಂದಿಗೆ ಆನೆಗುಂದಿ ಸಂಸ್ಥಾನದ ರಾಜವಂಶಸ್ಥ ಶ್ರೀ ಕೃಷ್ಣದೇವರಾಯ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Smt @nsitharaman was accorded a warm welcome by @BJP4Karnataka Karyakartas upon her arrival at the Hubbali Airport.
Shri Arvind Bellad, MLA, was also present. pic.twitter.com/l0q9YUQ4yD
— Nirmala Sitharaman Office (@nsitharamanoffc) October 14, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.