ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ವಿಧ್ವಂಸಕತೆ, ತಮ್ಮ ಪಕ್ಷದ ಕೆಲ ನಾಯಕರುಗಳು ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಹೇಳಿಕೆಗಳನ್ನು ನೀಡುವಾಗ ನಾಯಕರುಗಳು ತುಂಬಾ ಜಾಗರೂಕರಾಗಿರಬೇಕು, ವಿಧ್ವಂಸಕ ಕೃತ್ಯಗಳಲ್ಲಿ ಭಾಗವಹಿಸುವ ಜನರು ತೀವ್ರ ಖಂಡನೆಗೆ ಅರ್ಹರು. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಕೆಲವರು ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿರುವುದು ನಿಜಕ್ಕೂ ಬೇಸರ ತರಿಸುವ ಸಂಗತಿಯಾಗಿದೆ ಎಂದಿದ್ದಾರೆ.
ಅಲ್ಲದೇ ವಿಧ್ವಂಸಕತೆಯನ್ನು ಬಿಟ್ಟು ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದ್ದಾರೆ.
ಜಮ್ಮು ಕಾಶ್ಮೀರ ಶಾಸಕನ ಮೇಲೆ ಇಂಕ್ ದಾಳಿ ನಡೆಸಿದ ಹಿಂದೂ ಸೇನಾ ಕಾರ್ಯಕರ್ತರ ಕ್ರಮವನ್ನು ಖಂಡಿಸಿರುವ ಅವರು, ಬಿಜೆಪಿಯ ಸಹ ಸಂಘಟನೆಗಳು ಅವರ ರೀತಿಯ ಯಾವುದೇ ಕೃತ್ಯಗಳನ್ನು ನಡೆಸಿಲ್ಲ ಎಂದಿದ್ದಾರೆ.
ಈ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೂ, ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ತಮ್ಮ ಪಕ್ಷದ ನಾಯಕರುಗಳಿಗೆ ಸಮನ್ಸ್ ಜಾರಿಗೊಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.