ಫೈಝಾಬಾದ್: ಬಾಬ್ರಿ ಮಸೀದಿ ಪ್ರಕರಣದ ಅತಿ ಪ್ರಮುಖ ವ್ಯಾಜ್ಯದಾರ ಹಸೀಮ್ ಅನ್ಸಾರಿಯವರು ದೇಶದಾದ್ಯಂತ ಗೋಮಾಂಸ ನಿಷೇಧಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಗೋಮಾಂಸವನ್ನು ದೇಶದಾದ್ಯಂತ ನಿಷೇಧಿಸಬೇಕು ಎಂದಿರುವ ಅವರು, ಈ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯವಿರಬಾರದು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅವರು, ಉಗ್ರ ಜನರನ್ನು ನಿಗ್ರಹಿಸಲು ಮೋದಿ ಪ್ರಯತ್ನಿಸುತ್ತಿದ್ದಾರೆ. ಈ ದೇಶದಲ್ಲಿ ಶಾಂತಿ ಸ್ಥಾಪನೆಯಾಗುವುದು ಅತ್ಯಗತ್ಯ ಎಂದಿದ್ದಾರೆ.
ಸಮಾಜವಾದಿ ಮುಖಂಡ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಅವರು, ಮುಲಾಯಂ ಎಂದಿಗೂ ತನ್ನ ಮಾತಿಗೆ ಬದ್ಧರಾಗಿರುವುದಿಲ್ಲ. ಮುಸ್ಲಿಮರೂ ಅವರ ರಾಜಕೀಯವನ್ನು ಅರ್ಥೈಸಿಕೊಂಡಿದ್ದಾರೆ ಎಂದಿದ್ದಾರೆ.
ಅಜಂಖಾನ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿ, ಅವರಿಂದಲೇ ಹಿಂದೂ ಮತ್ತು ಮುಸ್ಲಿಮರು ವಿಭಜನೆಯಾಗುತ್ತಿದ್ದಾರೆ. ಅವರು ಮುಸ್ಲಿಮರ ಹಿತೈಷಿ ಅಲ್ಲ. ಬದಲಾಗಿ ಮುಸ್ಲಿಮರಿಗೆ ಹಾನಿಯುಂಟು ಮಾಡುವವರು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.