
ನವದೆಹಲಿ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದ 550ನೇ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗೋವಾದ ಪರ್ತಗಲಿಯಲ್ಲಿ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಈ ಪ್ರತಿಮೆಯು ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆಯೂ ಆಗಿದೆ. ಕರ್ನಾಟಕದಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪ್ರಧಾನಿಯವರು ಈ ಭವ್ಯ ಕಾರ್ಯಕ್ರಮದಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಗುಜರಾತ್ನಲ್ಲಿ ಏಕತಾ ಪ್ರತಿಮೆಯನ್ನು ರಚಿಸಿದ ಕಲಾವಿದ ರಾಮ್ ಸುತಾರ್ ಈ ಪ್ರತಿಮೆಯನ್ನು ರಚಿಸಿದ್ದಾರೆ.
ನಂತರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದ ಹೊಸದಾಗಿ ಅಭಿವೃದ್ಧಿಪಡಿಸಿದ ಆವರಣವನ್ನು ಪ್ರಧಾನಿ ಉದ್ಘಾಟಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



