
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಾವಿನ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ನಂತರ, ಪಾಕಿಸ್ಥಾನದಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. ಖಾನ್ ಅವರ ರಾಜಕೀಯ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಿಗರಿಂದ ಬೃಹತ್ ಪ್ರತಿಭಟನೆಗಳು ನಡೆಯುವ ಸಾಧ್ಯತೆಯ ಹಿನ್ನೆಲೆಯಲ್ಲಿ, ರಾವಲ್ಪಿಂಡಿಯ ಅಧಿಕಾರಿಗಳು ಡಿಸೆಂಬರ್ 1 ರಿಂದ 3 ರವರೆಗೆ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿ ನಗರದಲ್ಲಿ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ.
ಈ ಸಂಬಂಧ ಉಪ ಆಯುಕ್ತ ಡಾ. ಹಸನ್ ವಕಾರ್ ಚೀಮಾ ಅವರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ ಎಂದು ಪಾಕಿಸ್ಥಾನಿ ಪತ್ರಿಕೆ ದಿ ಡಾನ್ ವರದಿ ಮಾಡಿದೆ. ಖಾನ್ ಪ್ರಸ್ತುತ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿದ್ದಾರೆ. ಖಾನ್ ಅವರ ಸಾವಿನ ವದಂತಿಗಳು ಆನ್ಲೈನ್ನಲ್ಲಿ ಹರಡಿದ ನಂತರ ಅವರ ಬೆಂಬಲಿಗರು ಅವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಆಗ್ರಹಿಸುತ್ತಿದ್ದಾರೆ.
ಪಿಟಿಐ ಬೆಂಬಲಿಗರು ಪ್ರತಿಭಟನೆ ನಡೆಸಲು ಈಗಾಗಲೇ ಜೈಲಿನ ಹೊರಗೆ ಜಮಾಯಿಸಲು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಪಕ್ಷವು ಅವರನ್ನು ಭೇಟಿಯಾಗಲು ವಿನಂತಿಸಿ ಆರು ವಕೀಲರ ಪಟ್ಟಿಯನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಸಿದೆ ಎಂದು ಮೂಲಗಳು ವರದಿ ಮಾಡಿವೆ.
ಕಳೆದ ವಾರ, ಖೈಬರ್ ಪಖ್ತುನ್ಖ್ವಾ ಮುಖ್ಯಮಂತ್ರಿ ಸೊಹೈಲ್ ಅಫ್ರಿದಿ ಅವರು ಖಾನ್ ಅವರನ್ನು ಭೇಟಿ ಮಾಡಲು ರಾವಲ್ಪಿಂಡಿಗೆ ತೆರಳಿದ್ದ ಸಂದರ್ಭದಲ್ಲಿ ಅಡಿಯಾಲ ಜೈಲಿನ ಹೊರಗೆ ಪಾಕಿಸ್ಥಾನಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿದರು.
ಕಳೆದ ಒಂದು ವಾರದಿಂದ, ಖಾನ್ ಸಾವಿನ ಬಗ್ಗೆ ಪರಿಶೀಲಿಸದ ವರದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ, ಪಾಕಿಸ್ಥಾನಿ ಅಧಿಕಾರಿಗಳು ಈ ವರದಿಗಳನ್ನು ನಿರಾಕರಿಸಿದ್ದಾರೆ. ಇನ್ನೊಂದೆಡೆ ಪಿಟಿಐ ಬೆಂಬಲಿಗರು ಪಾಕಿಸ್ಥಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನಿ ಖಾನ್ ಅವರ ಹತ್ಯೆಯ ಸಂಚನ್ನು ರೂಪಿಸಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.
It is deeply alarming for the entire nation that Imran Khan’s meetings continue to be blocked by the authorities. As CM Sohail Afridi stated, it has now been 28 days since 4th November and he has not been allowed to meet a single person.
This must end immediately , his meetings… pic.twitter.com/E2Ak2FCw45
— PTI Canada Official (@PTIOfficialCA) December 1, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



