ನವದೆಹಲಿ: ಸ್ವಾತಂತ್ರ್ಯ ಸೇನಾನಿ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಬಗೆಗಿನ ರಹಸ್ಯ ಮಾಹಿತಿಗಳನ್ನು ನೀಡುವಂತೆ ಭಾರತ ಮಾಡಿಕೊಂಡಿರುವ ಮನವಿಗೆ ರಷ್ಯಾ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಭಾರತ ಮಾಡಿಕೊಂಡಿರುವ ಮನವಿಯ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಷ್ಯಾದ ವಿದೇಶಾಂಗ ಸಚಿವ ಸರ್ಜಿ ಲವ್ರೋವ್ ಅವರು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಭರವಸೆ ನೀಡಿದ್ದಾರೆ.
ರಷ್ಯಾ ಪ್ರವಾಸದಲ್ಲಿರುವ ಸುಷ್ಮಾ ಅವರು ಲವ್ರೋವ್ ಅವರಿಗೆ ನೇತಾಜೀ ಬಗೆಗಿನ ರಹಸ್ಯ ಮಾಹಿತಿಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಲವ್ರೋವ್, ನಮ್ಮಲ್ಲಿ ನೇತಾಜೀ ಬಗೆಗಿನ ಮಾಹಿತಿಯಿದ್ದರೆ ಅದನ್ನು ಹಂಚಿಕೊಳ್ಳುವ ಬಗ್ಗೆ ಖಂಡಿತಾ ಪರಿಶೀಲನೆ ನಡೆಸುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಜನವರಿ 23 ರಂದು ನೇತಾಜೀ ಬಗೆಗಿನ ರಹಸ್ಯ ಕಡತಗಳನ್ನು ಬಹಿರಂಗಪಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.