ನವದೆಹಲಿ: ದೆಹಲಿಯಲ್ಲಿ ನಡೆದ ಅತ್ಯಾಚಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮಕ್ಕಳನ್ನು ಬಳಕೆ ಮಾಡಿಕೊಂಡಿರುವುದಕ್ಕೆ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಮಕ್ಕಳ ಮೇಲೆ ಗ್ಯಾಂಗ್ರೇಪ್ ನಡೆದಿತ್ತು, ಅದನ್ನು ವಿರೋಧಿಸುವ ಸಲುವಾಗಿ ನೂರಾರು ಮಕ್ಕಳೊಂದಿಗೆ ಕಾಂಗ್ರೆಸ್ನ ಮಹಿಳಾ ಮೋರ್ಚಾ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.
ಪ್ರತಿಭಟನೆಯ ವೇಳೆ ಕೇಜ್ರಿವಾಲ್ ಮತ್ತು ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕಿಯರು ತೀವ್ರ ವಾಗ್ ಪ್ರಹಾರ ನಡೆಸಿದ್ದರು.
ಇದನ್ನು ತೀವ್ರವಾಗಿ ಖಂಡಿಸಿರುವ ಎಎಪಿ ಮತ್ತು ಬಿಜೆಪಿ, ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
ಆದರೆ ತನ್ನ ಕ್ರಮವನ್ನು ಕಾಂಗ್ರೆಸ್ ಸಮರ್ಥಿಸಿಕೊಂಡಿದ್ದು, ಇದೊಂದು ಸಾಂಕೇತಿಕ ಪ್ರತಿಭಟನೆ ಅಷ್ಟೇ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.