ಜಮ್ಮು: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಶನಿವಾರ ಸಾಂಬಾ ಸೆಕ್ಟರ್ನ ಆರ್ಮಿ ಕ್ಯಾಂಪನ್ನು ಟಾರ್ಗೆಟ್ ಮಾಡಿರುವ ಉಗ್ರರು ರಕ್ಷಣಾಪಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ. ಸ್ಥಳದಲ್ಲೇ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯೋಧರು ಸಫಲರಾಗಿದ್ದಾರೆ.
ಮುಂಜಾಗೃತೆಯ ಕ್ರಮವಾಗಿ ಸಾಂಬಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವೈಷ್ಣೋದೇವಿ ಯಾತ್ರಿಕರಿಗೆ ನೀಡಿರುವ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
‘ಕಾರ್ಯಾಚರಣೆ ಮುಂದುವರೆದಿದ್ದು ಸಂಪೂರ್ಣ ವರದಿ ಇನ್ನಷ್ಟೇ ಲಭ್ಯವಾಗಿದೆ. ಕಳೆದ ಎರಡು ದಿನಗಳಿಂದ ನಮ್ಮ ರಕ್ಷಣಾಪಡೆಗಳು ಹೈಅಲರ್ಟ್ನಲ್ಲಿವೆ. ಇಂದಿನ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಉಗ್ರರು ಯಾವುದೇ ಆರ್ಮಿ ಘಟಕದೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿಲ್ಲ ಬದಲಾಗಿ ಹೊರಗಿನಿಂದಲೇ ಗುಂಡು ಹಾರಿಸುತ್ತಿದ್ದಾರೆ’ ಎಂದು ಸೈನ್ಯಾಧಿಕಾರಿ ಮನೀಶ್ ಮೆಹ್ತಾ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.