
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 14 ವರ್ಷ ವಯಸ್ಸಿನ ಬಾಲಕಿಯರಿಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಹಾಕುವ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಈ ಉಪಕ್ರಮವು ಮಹಿಳೆಯರಲ್ಲಿ ಕ್ಯಾನ್ಸರ್ ಸಂಬಂಧಿತ ಕಾಯಿಲೆಗೆ ಪ್ರಮುಖ ಕಾರಣಗಳಲ್ಲಿ ಒಂದಾದ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ ಮತ್ತು ದೇಶಾದ್ಯಂತ ಹುಡುಗಿಯರು ಮತ್ತು ಮಹಿಳೆಯರ ದೀರ್ಘಕಾಲೀನ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ.
ಪ್ರಧಾನ ಮಂತ್ರಿಯವರ ಸಮ್ಮುಖದಲ್ಲಿ, ಐದು ಬಾಲಕಿಯರಿಗೆ HPV ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಲಸಿಕೆ ಹಾಕಿದ ನಂತರ, ಪ್ರಧಾನ ಮಂತ್ರಿಗಳು ಹೆಣ್ಣು ಮಕ್ಕಳೊಂದಿಎ ಸಂವಹನ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


