
ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ.
ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ” ಎಂದಿದ್ದಾರೆ.
ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು ಇರಾನ್ನ ಮಧ್ಯಂತರ ನಾಯಕತ್ವ ಮಂಡಳಿ ನಿರ್ಧರಿಸಿದೆ. ಆದರೆ, ಆ ದೇಶಗಳ ನೆಲದಿಂದ ಇರಾನ್ ಮೇಲೆ ದಾಳಿ ನಡೆದರೆ ತಿರುಗೇಟು ನೀಡುವುದಾಗಿ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ.
ಫೆಬ್ರವರಿ 28 ರಂದು ಅಮೆರಿಕ-ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಮತ್ತು ಅವರ ಕುಟುಂಬಸ್ಥರು ಹತರಾಗಿದ್ದರು. ಇದಕ್ಕೆ ಪ್ರತಿಕಾರವಾಗಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗಳು ದುಬೈ, ಅಬುಧಾಬಿ, ಕತಾರ್ ಮತ್ತು ಬಹ್ರೇನ್ನಂತಹ ಗಲ್ಫ್ ರಾಷ್ಟ್ರಗಳಿಗೂ ತಗುಲಿತ್ತು. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದರು. ಅಲ್ಲದೆ ಬುರ್ಜ್ ಅಲ್ ಅರಬ್ ಹೋಟೆಲ್ ಮತ್ತು ಸೌದಿ ಅರಾಮ್ಕೊ ತೈಲ ಸಂಸ್ಕರಣಾ ಕೇಂದ್ರಗಳ ಮೇಲೆಯೂ ಇರಾನ್ ದಾಳಿ ನಡೆಸಿದೆ ಎಂಬ ವರದಿಗಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


