
ನವದೆಹಲಿ: ಭಾರತದಲ್ಲಿನ ಎಲ್ಪಿಜಿ ಪರಿಸ್ಥಿತಿಯ ಬಗ್ಗೆ ಭೀತಿ ಮೂಡಿಸಲು ಪ್ರಯತ್ನಿಸುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿ ತರಾಟೆಗೆ ತೆಗೆದುಕೊಂಡಿದ್ದು, ಇಂತಹ ಜನರ ಮುಂದೆ ತಮ್ಮ ನಿಜ ಮುಖವನ್ನು ಬಹಿರಂಗಪಡಿಸಿಕೊಳ್ಳುವುದಲ್ಲದೆ ದೇಶಕ್ಕೂ ಹಾನಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಎನ್ಎಕ್ಸ್ಟಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತ ಬಿಕ್ಕಟ್ಟಿನಿಂದ ಯಾವುದೇ ದೇಶವು ಹೊರತಾಗಿಲ್ಲ ಮತ್ತು ಭಾರತದ ಇಂಧನ ಭದ್ರತೆಯನ್ನು ರಕ್ಷಿಸಲು ಸರ್ಕಾರ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ ಎಂದು ಹೇಳಿದರು.
ಪ್ರಸ್ತುತ ಪರಿಸ್ಥಿತಿಯ ಲಾಭವನ್ನು ಪಡೆಯುವ ಮೂಲಕ ಕೆಲವು ಜನರು ಕೆಲವು ಉತ್ಪನ್ನಗಳನ್ನು ಕಪ್ಪು ಮಾರುಕಟ್ಟೆಗೆ ತರಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅಂತಹ ನಿರ್ಲಜ್ಜ ಅಂಶಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
“ಕೆಲವರು ಎಲ್ಪಿಜಿಯ ಬಗ್ಗೆ ಭೀತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮಯದಲ್ಲಿ ನಾನು ರಾಜಕೀಯ ಹೇಳಿಕೆ ನೀಡುವುದಿಲ್ಲ, ಆದರೆ ಈ ರೀತಿ ಮಾಡುವ ಮೂಲಕ ಅವರು ಜನರ ಮುಂದೆ ತಮ್ಮ ನಿಜ ಬಣ್ಣವನ್ನು ಬಟಾಬಯಲು ಮಾಡುತ್ತಿದ್ದಾರೆ ಮತ್ತು ದೇಶಕ್ಕೂ ನಷ್ಟ ಉಂಟು ಮಾಡುತ್ತಿದ್ದಾರೆ ಎಂಬುದನ್ನು ಖಚಿತವಾಗಿ ಹೇಳಬಲ್ಲೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


