
ವಾಷಿಂಗ್ಟನ್: ಇರಾನ್ನ ಜನರು ನನ್ನನ್ನು ತಮ್ಮ ಸರ್ವೋಚ್ಚ ನಾಯಕನನ್ನಾಗಿ ಮಾಡಲು ಬಯಸುತ್ತಿದ್ದಾರೆ, ಆದರೆ ಇದಕ್ಕೆ ನಾನು ಒಪ್ಪಿಕೊಂಡಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ತನಗೆ ಆ ಸ್ಥಾನವನ್ನು ವಹಿಸಿಕೊಳ್ಳಲು ಆಸಕ್ತಿ ಇಲ್ಲ ಎಂದಿದ್ದಾರೆ.
ವಾಷಿಂಗ್ಟನ್ನಲ್ಲಿ ನಡೆದ ರಿಪಬ್ಲಿಕನ್ ನಿಧಿಸಂಗ್ರಹಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ಇರಾನ್ ಸುಮಾರು ಒಂದು ತಿಂಗಳ ಕಾಲ ನಡೆದ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತಿದೆ ಎಂಬ ತಮ್ಮ ಹಳೆಯ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ, ಟೆಹ್ರಾನ್ನಲ್ಲಿರುವ ಅಧಿಕಾರಿಗಳು ವಾಷಿಂಗ್ಟನ್ನೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಆದರೆ ದೇಶದೊಳಗೆ ದಂಗೆ ನಡೆಯಬಹುದೆಂಬ ಭಯದಿಂದಾಗಿ ಅದನ್ನು ಒಪ್ಪಿಕೊಳ್ಳಲು ಹೆದರುತ್ತಿದ್ದಾರೆ ಎಂದಿದ್ದಾರೆ.
ಅಮೆರಿಕ-ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ನಂತರ, ಇರಾನ್ನ ಮುಂದಿನ ಸರ್ವೋಚ್ಚ ನಾಯಕನಾಗುವ ಕಲ್ಪನೆಯನ್ನು ಟೆಹ್ರಾನ್ನಲ್ಲಿನ ನಾಯಕತ್ವವು ಅನೌಪಚಾರಿಕವಾಗಿ ಮುಂದಿಟ್ಟಿತು, ಆದರೆ ನಾನು ಅದನ್ನು ತಿರಸ್ಕರಿಸಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.
ಮಾಜಿ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರ ಇರಾನ್ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ಸರ್ವೋಚ್ಚ ನಾಯಕರನ್ನಾಗಿ ನೇಮಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


