ನವದೆಹಲಿ: ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್ ಸಿಕ್ಕಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅ.25ರಂದು ತಮ್ಮ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ನಡೆಸಲಿದ್ದಾರೆ.
ಬಿಹಾರದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಮೋದಿ ಈ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಪ್ರತಿಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದವು. ಆದರೆ ಇದಕ್ಕೆ ಆಯೋಗ ನಿರಾಕರಿಸಿದೆ. ಹೀಗಾಗಿ ಪ್ರತಿ ತಿಂಗಳಂತೆ ಈ ತಿಂಗಳೂ ‘ಮನ್ ಕೀ ಬಾತ್’ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದ ವೇಳೆ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿದ ಪಕ್ಷದಲ್ಲಿ ಕ್ರಮಕೈಗೊಳ್ಳುವುದಾಗಿ ಆಯೋಗ ತಿಳಿಸಿದೆ.
ಪ್ರತಿ ತಿಂಗಳು ಹಲವಾರು ವಿಷಯಗಳ ಬಗ್ಗೆ ಮೋದಿಯವರು ಮನ್ ಕೀ ಮಾತ್ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ. ಈ ಬಾರಿ ಜನರು ಮೋದಿಗೆ ಕೇಳಿದ ಪ್ರಶ್ನೆಗಳ ಆಡಿಯೋವನ್ನು ಪ್ರಸಾರ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.