ನವದೆಹಲಿ: ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಹೇಳಿ ತಮ್ಮ ಸಾಹಿತ್ಯ ಅಕಾಡಮಿ ಪ್ರಶಸ್ತಿಗಳನ್ನು ಹಿಂದಿರುಗಿಸಿರುವ ಬರಹಗಾರರು ದೆಹಲಿಯಲ್ಲಿ ಶುಕ್ರವಾರ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
40 ಸಾಹಿತಿಗಳು, ಕವಿಗಳು ಮಧ್ಯ ದೆಹಲಿಯ ಮಂಡಿ ಹೌಸ್ನಲ್ಲಿ ಅಕಾಡಮಿ ಕಛೇರಿ ಮುಂಭಾಗದಲ್ಲಿ ಬಾಯಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಸಾಹಿತ್ಯ ಅಕಾಡಮಿ ತುರ್ತು ಸಭೆಯನ್ನು ಕರೆದು ಸಾಹಿತಿಗಳ ಪ್ರಶಸ್ತಿ ವಾಪಾಸ್ಸಾತಿಯ ಬಗ್ಗೆ ಚರ್ಚೆ ನಡೆಸುತ್ತಿದೆ.
ಪ್ರೋ.ಎಂ.ಎಂ.ಕಲಬುರ್ಗಿಯವರ ಹತ್ಯೆಯಂತಹ ಪ್ರಕರಣಗಳಲ್ಲಿ ಅಕಾಡಮಿ ಕಠಿಣ ನಿಲುವನ್ನು ತಾಳಬೇಕು ಎಂದು ಆಗ್ರಹಿಸಿರುವ ಬರಹಗಾರರು, ದೇಶದಲ್ಲಿ ದಲಿತರ, ಸಾಹಿತಿಗಳ, ಅಲ್ಪಸಂಖ್ಯಾತರ ಮೇಲೆ ದಾಳಿಗಳಾಗುತ್ತಿದೆ. ವಾಕ್ ಸ್ವಾತಂತ್ರ್ಯ ಹರಣವಾಗುತ್ತಿದೆ, ಫ್ಯಾಸಿಸ್ಟ್ ಧೋರಣೆ ಅನುರಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಇವರಿಗೆ ಟಾಂಗ್ ನೀಡುವ ಸಲುವಾಗಿ ಮತ್ತೊಂದು ಸಾಹಿತಿಗಳ ಗುಂಪು ಅದೇ ಆವರಣದಲ್ಲಿ ಸಾಹಿತ್ಯ ಪ್ರಶಸ್ತಿ ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ಮೋದಿ ಸರ್ಕಾರದ ಸಿದ್ಧಾಂತದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವ ಸಾಹಿತಿಗಳು ಪ್ರಶಸ್ತಿಗಳನ್ನು ಹಿಂದಿರುಗಿಸುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಈ ಗುಂಪು ಆರೋಪಿಸಿದೆ.
ಈ ದೇಶದಲ್ಲಿ ಇದಕ್ಕಿಂತಲೂ ದೊಡ್ಡ ಘಟನೆಗಳು ಸಂಭವಿಸಿದಾಗ ಇವರುಗಳು ಧ್ವನಿಯೆತ್ತಲಿಲ್ಲವೇಕೆ ಎಂದು ಅದು ಪ್ರಶ್ನಿಸಿದೆ. ಅಲ್ಲದೇ ’ಗೆಟ್ ವೆಲ್ ಸೂನ್’ ಎಂಬ ಫಲಕವನ್ನು ಪ್ರದರ್ಶಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.