
ರಾಂಪುರ್: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ಪಕ್ಷಗಳನ್ನು ತೀವ್ರವಾಗಿ ಟೀಕಿಸಿದ್ದು, ಅವರ ರಾಮಭಕ್ತಿಯನ್ನು ಪ್ರಶ್ನೆ ಮಾಡಿದ್ದಾರೆ.
ಇಂದು ರಾಂಪುರ್ನಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,“ಜೈ ಶ್ರೀ ರಾಮ್ ಘೋಷಿಸಿದ ಜನರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ ಭಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಕುಹಕವಾಡಿದರು.
“ರಾಮ ಭಕ್ತರ ಮೇಲೆ ಗುಂಡು ಹಾರಿಸುತ್ತಿದ್ದವರು ಈಗ ರಾಮ ಭಕ್ತಿ ಬೋಧಿಸುತ್ತಿದ್ದಾರೆ” ಎಂದರು.
ಅಯೋಧ್ಯಾ ರಾಮ ಮಂದಿರದ ಹುಂಡಿ ದೇಣಿಗೆಗಳ ಕಳ್ಳತನದ ಆರೋಪದ ಬಗ್ಗೆ ವಿರೋಧ ಪಕ್ಷಗಳು ಎತ್ತುತ್ತಿರುವ ಪ್ರಶ್ನೆಗಳಿಗೆ ತಿರುಗೇಟು ನೀಡಿದ ಅವರು, ಇದು ಸನಾತನ ಧರ್ಮದ ಭಾವನೆಗಳೊಂದಿಗೆ ಆಟವಾಡುವ ಪ್ರಯತ್ನ ಎಂದು ಆರೋಪಿಸಿದರು.
ರಾಮ ಮಂದಿರದ ದೇಣಿಗೆಗಳ ಕಳ್ಳತನ ಪ್ರಕರಣದಲ್ಲಿ SIT ತನಿಖೆ ನಡೆಯುತ್ತಿದ್ದು, ಆರೋಪಿಗಳ ಮೇಲೆ ಕ್ರಮ ತೆಗೆಯಲಾಗುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



