News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಾಕಿ ಕಡತಗಳ ತ್ವರಿತ ವಿಲೇವಾರಿಗೆ ಒತ್ತು: ಸಾರ್ವಜನಿಕ ಅಹವಾಲು ಸಭೆಯಲ್ಲಿ ಶಾಸಕ ಗಂಟಿಹೊಳೆ

ಬೈಂದೂರು: ಕುಂದಾಪುರ ತಾಲೂಕಿನ ವಂಡ್ಸೆ ಹೋಬಳಿಯ ಸಾರ್ವಜನಿಕ ತಾಲೂಕು ಕಚೇರಿಗೆ ಸಲ್ಲಿಸಿರುವ ವಿವಿಧ ಅರ್ಜಿಗಳು ಬಾಕಿ ಇದ್ದ ಹಿನ್ನಲೆಯಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ  ಗುರುರಾಜ್ ಗಂಟಿಹೊಳೆಯವರು ತಹಸೀಲ್ದಾರರ ಸಮ್ಮುಖ ಕಂದಾಯ ಅಧಿಕಾರಿಗಳ ಸಭೆ ನಡೆಸಿದರು.

ಹೋಬಳಿಯ ಯಾವುದೇ ಅರ್ಜಿದಾರರು ಸರಿಯಾದ ಪೂರಕ ದಾಖಲೆ ನೀಡಿದ ಹೊರತಾಗಿಯೂ ಸಕಾಲದಲ್ಲಿ ಕಡತ ವಿಲೇವಾರಿ ಆಗದೇ ಇದ್ದಲ್ಲಿ ಇಡೀ ತಾಲೂಕು ಕಚೇರಿ ವ್ಯವಸ್ಥೆಗೆ ಕೆಟ್ಟ ಹೆಸರು ಬರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ಅರ್ಜಿಗಳನ್ನು ಬಾಕಿ ಇರಿಸಿಕೊಳ್ಳದೆ ಅಗತ್ಯ ಇದ್ದಲ್ಲಿ ಮಾತ್ರ ಹಿಂಬರಹ ನೀಡಿ, ಉಳಿದಂತೆ ಕಡತಗಳನ್ನು ಅರ್ಜಿದಾರರಿಗೆ ಅನುಕೂಲ ಆಗುವ ದೃಷ್ಟಿಯಲ್ಲಿ ವಿಲೇವಾರಿ ಮಾಡಲು ಮುಖ್ಯವಾಗಿ ಆರ್ ಟಿ ಸಿ ಸಮಸ್ಯೆಗಳು, ಭೂ ವ್ಯಾಜ್ಯ, ಅಕ್ರಮ ಸಕ್ರಮ, 94 ಸಿ, ಆರ್ ಆರ್ ಟಿ ಹಾಗೂ 11 ಈ ಕಡತಗಳನ್ನು ಆದ್ಯತೆಯಲ್ಲಿ ವಿಲೇ ಗೊಳಿಸಿ ಎಂದು ಸೂಚನೆ ನೀಡಿದರು.

ಶಾಸಕರ ಕಚೇರಿಗೆ ಸಮಸ್ಯೆಗಳ ನಿವಾರಣೆ ಬಗ್ಗೆ ಮನವಿ ಮಾಡಿದ ಅರ್ಜಿದಾರರನ್ನು ಅಧಿಕಾರಿಗಳ ಜೊತೆ ಮುಖಾಮುಖಿ ಮಾಡಿಸಲಾಗಿ ಸದ್ರಿ ಅರ್ಜಿಗಳನ್ನು ಕೂಡಲೇ ಇತ್ಯರ್ಥ ಪಡಿಸಲು ಸೂಚಿಸಿ,ಸಮರ್ಪಕ ದಾಖಲೆ ಇದ್ದರೂ ಕೆಲಸ ಮಾಡಿ ಕೊಡದೇ ಅಥವಾ ಸತಾಯಿಸದೆ ತ್ವರಿತವಾಗಿ ಸ್ಪಂದಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಂಟಿ ಸರ್ವೇ ಚುರುಕುಗೊಳಿಸಿ :

ಅಕ್ರಮ ಸಕ್ರಮ ಹಾಗೂ 94 ಸಿ ಅರ್ಜಿಗಳ ತ್ವರಿತ ವಿಲೇವಾರಿ ನೆಲೆಯಲ್ಲಿ ನಿರಂತರವಾಗಿ ಜಂಟಿ ಸರ್ವೇ ನಡೆಸಲು ಈಗಾಗಲೇ ಹಲವು ಬಾರಿ ತಿಳಿಸಲಾಗಿದೆ. ಸದರಿ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದ್ದರೂ, ಜಂಟಿ ಸರ್ವೇಯನ್ನು ಚುರುಕು ಗೊಳಿಸಿ ಅರ್ಹರಿಗೆ ಭೂಮಿ ಹಕ್ಕು ನೀಡಲು ಕ್ರಮ ವಹಿಸಲು ತಹಸೀಲ್ದಾರರಿಗೆ ಸೂಚನೆ ನೀಡಿದರು.

94 ಸಿ ಹಕ್ಕು ಪತ್ರ ವಿತರಣೆ :

ವಂಡ್ಸೆ ಹೋಬಳಿಯ ತಲ್ಲೂರು ಹಾಗೂ ದೇವಲ್ಕುoದ ಗ್ರಾಮಗಳ ಅರ್ಹ 03 ಜನ ಫಲಾನುಭವಿಗಳಿಗೆ ಇದೇ ಸಂದರ್ಭದಲ್ಲಿ ಶಾಸಕರು 94 ಸಿ ಹಕ್ಕು ಪತ್ರ ವಿತರಿಸಿದರು.

ಸಭೆಯಲ್ಲಿ ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರುಡೇಕರ್, ಉಪ ತಹಸೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಕ ರಾಘವೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top