ಬೆಳ್ತಂಗಡಿ : ತಾಲೂಕು ಬಂಟರಯಾನೆ ನಾಡವರ ಸಂಘದ ವತಿಯಿಂದ ಗುರುವಾಯನಕೆರೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಹವಾನಿಯಂತ್ರಿತ ಬಂಟರ ಭವನದ ಉದ್ಘಾಟನಾ ಸಮಾರಂಭ ನ.23 ರಂದು ನಡೆಯಲಿದ್ದು ಇದರ, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಈಚೆಗೆ ಗುರುವಾಯನಕೆರೆಯ ಹಾರಾಡಿ ರಾಜೀವ ಶೆಟ್ಟಿ ಸಭಾ ಭವನದಲ್ಲಿ ಜರಗಿತು.
ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕಟ್ಟಡ ಸಮಿತಿಯ ಗೌರವಾಧ್ಯಕ್ಷ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಕಟ್ಟಡ ನಿರ್ಮಾಣಕ್ಕೆ ಇಳಿದು, ಛಲ ತೋರಿಸಿರುವ ನಿಮ್ಮ ಧೈರ್ಯವನ್ನು ಮೆಚ್ಚುವಂತದ್ದು. ಬಂಟರು ಯಾವಕಾರಣಕ್ಕೂ ಹಿಂದೆ ಸರಿಯುವ ಜಾಯಮಾನದವರಲ್ಲ ಎಂಬುವುದನ್ನು ಸಾಬೀತು ಪಡಿಸಿದ್ದೀರಿ. ಕಟ್ಟಡ ಸಮಿತಿಯ ಗೌರವಾಧ್ಯಕ್ಷನ ನೆಲೆಯಲ್ಲಿ ವೈಯುಕ್ತಿಕವಾಗಿ ಸಾಧ್ಯವಾಷ್ಟು ದೇಣಿಗೆ ನೀಡುವುದರ ಜೊತೆಗೆ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುತ್ತೇನೆ. ಸಮಾಜ ಬಂಧುಗಳ ಜೊತೆಗೆ ಪ್ರಮುಖ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಕರೆತರುವ ಜವಾಬ್ದಾರಿ ನಮ್ಮದಾಗಬೇಕು. ಈ ಮೂಲಕ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಟ್ಟಡ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿಯವರು ಕಟ್ಟಡ ಕಾಮಗಾರಿಯ ಪ್ರಗತಿಯ ಬಗ್ಗೆ ಹಾಗೂ ಸಮಾಜ ಬಂಧುಗಳಿಂದ ಸಂಗ್ರಹವಾಗಿರುವ ದೇಣಿಗೆ ಬಗ್ಗೆ ಮಾಹಿತಿ ನೀಡಿದರು. ಬಂಟರ ಸಂಘದ ತಾಲೂಕು ಅಧ್ಯಕ್ಷ ರಘುರಾಮ ಶೆಟ್ಟಿ ಸ್ವಾಗತಿಸಿದರು.
ವೇದಿಕೆಯಲ್ಲಿ ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯದರ್ಶಿ ಟಿ.ಆರ್.ಅಡ್ಯಂತಾಯ, ಸಂಘದ ಕಾರ್ಯದರ್ಶಿ ವಿಠಲ ಶೆಟ್ಟಿ, ಜೊತೆ ಕಾರ್ಯದರ್ಶಿ ಅನಿಲ ನಾಯ್ಗ, ಕೋಶಾಧಿಕಾರಿ ಕೃಷ್ಣ ರೈ, ಯುವ ವಿಭಾಗದ ಅಧ್ಯಕ್ಷ ವಸಂತ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಸಾರಿಕಾ ಶೆಟ್ಟಿ ಉಪಸ್ಥಿತರಿದ್ದರು.
ಕಟ್ಟಡ ನಿರ್ಮಾಣ ಸಮಿತಿಯ ಪದಾಧಿಕಾರಿಗಳು, ತಾಲೂಕು ಬಂಟರ ಸಂಘದ ಪದಾಧಿಕಾರಿಗಳು ಹಾಗೂ ಸಮಾಂಜ ಬಾಂಧವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.