
ನವದೆಹಲಿ: ಪಾಕಿಸ್ಥಾನ ಮೂಲದ ಭಯೋತ್ಪಾದಕ ಸಂಘಟನೆ ಕಳೆದ ಕೆಲವು ವರ್ಷಗಳಿಂದ ಭಾರೀ ನಷ್ಟವನ್ನು ಅನುಭವಿಸುತ್ತಿವೆ, ಇದಕ್ಕೆ ಕಾರಣ ಮೋದಿ ಸರ್ಕಾರದ ನೀತಿಗಳು.
ಪಾಕಿಸ್ಥಾನ ಮತ್ತು ಪಾಕಿಸ್ಥಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ (ಪಿಒಜೆಕೆ)ದಾದ್ಯಂತ ತನ್ನ ಅಪಾರ ಸಂಖ್ಯೆಯ ಸದಸ್ಯರನ್ನು ನಿರ್ನಾಮ ಮಾಡಲಾಗಿದೆ ಎಂದು ಹಿರಿಯ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಾರ್ಯಕರ್ತ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾನೆ.
ಭಾರತೀಯ ಭದ್ರತಾ ಸಂಸ್ಥೆಗಳು ಹುಡುಕುತ್ತಿರುವ ಲಷ್ಕರ್-ಎ-ತೈಬಾದ ಹಿರಿಯ ಕಮಾಂಡರ್ ರಿಜ್ವಾನ್ ಹನೀಫ್ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಅದರಲ್ಲಿ ಅವನು ಕಳೆದ ಮೂರು ನಾಲ್ಕು ವರ್ಷಗಳಲ್ಲಿ ಪೇಶಾವರ್, ಕರಾಚಿ, ರಾವಲ್ಪಿಂಡಿ, ಮುಜಫರಾಬಾದ್ ಮತ್ತು ರಾವಲಕೋಟ್‌ಗಳಲ್ಲಿ ನಡೆಸಲಾದ ಗುರಿ ದಾಳಿಗಳಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ. ಒಂದು ಹಂತದಲ್ಲಿ ಸುಮಾರು 40 ಸದಸ್ಯರನ್ನು ಕೊಲ್ಲಲಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ಥಾನದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಹನೀಫ್, ವಿವಿಧ ನಗರಗಳಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯ ಸದಸ್ಯರನ್ನು ವ್ಯವಸ್ಥಿತವಾಗಿ ನಿರ್ಮೂಲನೆ ಮಾಡಲಾಗಿದೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



