
ಬೀಜಿಂಗ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಚೀನಾದ ರಾಜಧಾನಿ ಬೀಜಿಂಗ್ಗೆ ಆಗಮಿಸಿದ್ದಾರೆ. ಅವರು ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಭಾರತ-ಚೀನಾ ಗಡಿ ವಿವಾದ ಕುರಿತು ಮಾತುಕತೆ ನಡೆಸುತ್ತಿದ್ದಾರೆ.
ಚೀನಾದ ವಿದೇಶಾಂಗ ಸಚಿವ ಮತ್ತು ಪೊಲಿಟ್ಬ್ಯೂರೋ ಸದಸ್ಯ ವಾಂಗ್ ಯಿ ಅವರ ಆಹ್ವಾನದ ಮೇರೆಗೆ ದೋವಲ್ ಅವರು ಆಗಸ್ಟ್ 24 ರಂದುಬಎರಡು ದಿನಗಳ ಪ್ರವಾಸಕ್ಕಾಗಿ ಬೀಜಿಂಗ್ಗೆ ತಲುಪಿದ್ದಾರೆ.
ಇಂದು ಇಬ್ಬರೂ 25ನೇ ಸುತ್ತಿನ ವಿಶೇಷ ಪ್ರತಿನಿಧಿಗಳ (Special Representatives) ಮಾತುಕತೆ ನಡೆಸುತ್ತಾರೆ. ಇದು ಭಾರತ-ಚೀನಾ ಗಡಿ ಪ್ರಶ್ನೆಯ ಬಗ್ಗೆ ಮುಖ್ಯ ಚರ್ಚಾ ವೇದಿಕೆ.
ದೋವಲ್ ಅವರು ಚೀನಾದ ಉಪಾಧ್ಯಕ್ಷ ಹಾನ್ ಝೆಂಗ್ ಅವರನ್ನು ಸಹ ಭೇಟಿಯಾದರು. ಅಲ್ಲಿ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡುವುದು ಹಾಗೂ ಆರ್ಥಿಕ, ರಾಜಕೀಯ ಮತ್ತು ಬಹುಪಕ್ಷೀಯ ಮಟ್ಟದಲ್ಲಿ ಸಂಬಂಧಗಳನ್ನು ಸುಧಾರಿಸುವ ಬಗ್ಗೆ ಚರ್ಚಿಸಲಾಯಿತು.
ಮಾತುಕತೆಗಳು ಸೆಪ್ಟೆಂಬರ್ 12-13ರಂದು ನವದೆಹಲಿಯಲ್ಲಿ ನಡೆಯಲಿರುವ BRICS ಸಮ್ಮೇಳನಕ್ಕೆ ಮುನ್ನ ನಡೆಯುತ್ತಿವೆ. ಚೀನಾದ ಅಧ್ಯಕ್ಷ ಶಿ ಜಿನ್ಪಿಂಗ್ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಇದು ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಸ್ಥಿರಗೊಳಿಸುವ ಪ್ರಯತ್ನದ ಭಾಗವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



