
ನವದೆಹಲಿ: ಬಾರಾಮುಲ್ಲಾದ ಯುವತಿಯೊಬ್ಬರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಜನರ ಸಂಕಷ್ಟವನ್ನು ಅಂತರರಾಷ್ಟ್ರೀಯ ವೇದಿಕೆಗೆ ಕೊಂಡೊಯ್ದಿದ್ದಾರೆ. ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (UNHRC) 63ನೇ ಅಧಿವೇಶನದಲ್ಲಿ, ಆ ಪ್ರದೇಶದಲ್ಲಿನ ಪ್ರತಿಭಟನೆಗಳ ವಿರುದ್ಧ ಇಸ್ಲಾಮಾಬಾದ್ ನಡೆಸಿದ ದಮನಕಾರಿ ಕ್ರಮಗಳ ವಿರುದ್ಧ ಅವರು ಧ್ವನಿ ಎತ್ತಿದರು.
ತಸ್ಲೀಮಾ ಅಖ್ತರ್ ಅವರು ‘ಅಸೋಸಿಯೇಷನ್ ಆಫ್ ಟೆರರ್ ವಿಕ್ಟಿಮ್ಸ್ ಇನ್ ಕಾಶ್ಮೀರ’ (ATVK) ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಸಾಮಾಜಿಕ-ರಾಜಕೀಯ ಕಾರ್ಯಕರ್ತೆಯಾಗಿದ್ದಾರೆ. ಜಿನೀವಾದಲ್ಲಿ ನಡೆದ UNHRC ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, PoKನಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಮೂಲಭೂತ ಹಕ್ಕುಗಳಿಗಾಗಿ ಶಾಂತಿಯುತವಾಗಿ ಆಗ್ರಹಿಸುತ್ತಿದ್ದ ನಾಗರಿಕರ ಮೇಲೆ ಪಾಕಿಸ್ತಾನದ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಆರೋಪಿಸಿದರು.
“ಪ್ರತಿಯೊಂದು ಹತ್ಯೆಯ ಬಗ್ಗೆಯೂ ಸ್ವತಂತ್ರ ತನಿಖೆ ನಡೆಯಬೇಕು ಮತ್ತು ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಮುಕ್ತ ಹಾಗೂ ನ್ಯಾಯಯುತ ಅವಕಾಶವಿರಬೇಕು,” ಎಂದು ಅವರು ಸಭೆಯಲ್ಲಿ ಹೇಳಿದರು.
“PoK ಅನ್ನು ‘ಆಜಾದ್ ಕಾಶ್ಮೀರ’ ಎಂದು ಕರೆಯುವುದು ಪಾಕಿಸ್ತಾನದ ಅತಿದೊಡ್ಡ ಸುಳ್ಳು. ಸ್ವತಂತ್ರ ರಾಷ್ಟ್ರವೊಂದರ ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಕೇಳಿದಾಗ ಅವರ ಮೇಲೆ ಗುಂಡಿನ ಮಳೆಗರೆಯುವುದಿಲ್ಲ,” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



