News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 26th September 2026

×
Home About Us Advertise With s Contact Us

12 ವರ್ಷಗಳಲ್ಲಿ ನಗರ, ಹಳ್ಳಿಗಳ ನಡುವಿನ ಅಂತರ ಗಣನೀಯವಾಗಿ ಕಡಿಮೆಯಾಗಿದೆ: ಮೋದಿ

ನವದೆಹಲಿ: ಕಳೆದ 12 ವರ್ಷಗಳಲ್ಲಿ ಭಾರತದಲ್ಲಿ ನಗರಗಳು ಮತ್ತು ಹಳ್ಳಿಗಳ ನಡುವಿನ ಅಂತರವು ಗಣನೀಯವಾಗಿ ಕಡಿಮೆಯಾಗಿದೆ. ಗ್ರಾಮೀಣ ಮೂಲಸೌಕರ್ಯದಲ್ಲಿನ ಗಮನಾರ್ಹ ಸುಧಾರಣೆಯಾಗಿದೆ ಮತ್ತು ದೇಶಾದ್ಯಂತ ಮಹಿಳೆಯರು ಹೆಚ್ಚು ಸ್ವಾವಲಂಬಿಗಳಾಗಿದ್ದಾರೆ ಹಾಗೂ ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

‘ಸೇವಾ ಸಂಕಲ್ಪ ಅಭಿಯಾನ’ದಡಿ ವಾರಣಾಸಿಯಿಂದ ವಡ್‌ನಗರದವರೆಗೆ ನಡೆಯುತ್ತಿರುವ ಯಾತ್ರೆಯಲ್ಲಿ ಪಾಲ್ಗೊಂಡಿರುವ ‘ಸೇವಾ ಯಾತ್ರಿʼಗಳೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸುವಾಗ ಪ್ರಧಾನಿ ಮೋದಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅವರು ಸಮಾಜ ಸೇವೆ, ಸಮಾಜ ಸುಧಾರಣೆ ಮತ್ತು ಸಕಾರಾತ್ಮಕ ಬದಲಾವಣೆಯ ಮಹತ್ವವನ್ನು ಒತ್ತಿ ಹೇಳಿದರು. ಎಲ್ಲರ ಕೊಡುಗೆ ಮತ್ತು ಭಾಗವಹಿಸುವಿಕೆಯಿಂದ ಮಾತ್ರ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ಸಾಧ್ಯ ಎಂದರು.

ತಮ್ಮ ಜೀವನವನ್ನು ರೂಪಿಸಿದ ಮೌಲ್ಯಗಳನ್ನು ವಡ್‌ನಗರವು ನೀಡಿದರೆ, ಕಾಶಿಯು ಆ ಮೌಲ್ಯಗಳಿಗೆ ಸೇವೆಯ ಅನೇಕ ಆಯಾಮಗಳನ್ನು ಸೇರಿಸಿತು ಎಂದು ಪ್ರಧಾನಿ ಮೋದಿ ತಿಳಿಸಿದರು. ಯುವಜನರು ಕೂಡ ಸೇವೆಯ ವಿವಿಧ ಆಯಾಮಗಳೊಂದಿಗೆ ಈ ಯಾತ್ರೆಯನ್ನು ಶ್ರೀಮಂತಗೊಳಿಸುತ್ತಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.

ಈ ಸಂವಾದದ ವೇಳೆ, ಯಾತ್ರಿಗಳು ಪ್ರಧಾನಿಯವರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಯಾತ್ರೆಯ ಅವಧಿಯಲ್ಲಿ ತಮ್ಮ ಅನುಭವಗಳನ್ನು ದಾಖಲಿಸಲು ದಿನಚರಿಯನ್ನು  ನಿರ್ವಹಿಸುವಂತೆಯೂ ಪ್ರಧಾನಿ ಮೋದಿ ಯಾತ್ರಿಗಳಿಗೆ ಸಲಹೆ ನೀಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top