
ನವದೆಹಲಿ: ಮಾದರಿ ನೀತಿ ಸಂಹಿತೆಯ (MCC) ಅಡಿಯಲ್ಲಿ ಸೇವೆಯಲ್ಲಿರುವ ಸರ್ಕಾರಿ ನೌಕರರಿಗೆ ಅನ್ವಯಿಸುವ ನಿರ್ಬಂಧಗಳು ಮತ್ತು ನಿಷೇಧಗಳು, ನಿವೃತ್ತ ಸರ್ಕಾರಿ ಅಧಿಕಾರಿಗಳಿಗೂ ಹಾಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಲ್ಲಿ ವಿವಿಧ ಹುದ್ದೆಗಳಲ್ಲಿ ತೊಡಗಿಸಿಕೊಂಡಿರುವ ಇತರ ವ್ಯಕ್ತಿಗಳಿಗೂ ಅನ್ವಯಿಸುತ್ತವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮುಂದಿನ ವರ್ಷ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಆಯೋಗವು ಈ ಕುರಿತು ಪತ್ರ ಬರೆದಿದೆ.
ಅಂತಹ ವ್ಯಕ್ತಿಗಳು ರಾಜಕೀಯ ತಟಸ್ಥತೆಯನ್ನು ಕಾಯ್ದುಕೊಳ್ಳಬೇಕು ಮತ್ತು ಚುನಾವಣಾ ಪ್ರಚಾರ ಅಥವಾ ಮತಯಾಚನೆಯಲ್ಲಿ ಭಾಗವಹಿಸುವುದರಿಂದ ದೂರವಿರಬೇಕು ಎಂದು ಆಯೋಗ ಹೇಳಿದೆ.
ಚುನಾವಣೆ ಘೋಷಣೆಯಾಗಿರುವ ಕ್ಷೇತ್ರ ಅಥವಾ ಜಿಲ್ಲೆಯ ಯಾವುದೇ ಚುನಾವಣಾ ಸಂಬಂಧಿತ ಅಧಿಕಾರಿಯನ್ನು, ಅಧಿಕೃತ ಚರ್ಚೆಗಳು ಅಥವಾ ಸಭೆಗಳಿಗಾಗಿ ಕರೆಯಬಾರದು ಅಥವಾ ಅಂತಹ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ಗಳನ್ನು ನಡೆಸಬಾರದು ಎಂದು ಆಯೋಗ ಸೂಚಿಸಿದೆ.
ಸರ್ಕಾರದಿಂದ ಸಂಪೂರ್ಣವಾಗಿ ಅಥವಾ ಭಾಗಶಃ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು, ನಿಗಮಗಳು ಮತ್ತು ಆಯೋಗಗಳು ಹಾಗೂ ಅವುಗಳ ಉದ್ಯೋಗಿಗಳಿಗೂ ಆದರ್ಶ ನೀತಿ ಸಂಹಿತೆಯ ನಿಯಮಗಳು ಅನ್ವಯಿಸುತ್ತವೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ರಾಜ್ಯಗಳಲ್ಲಿನ ಸಂಬಂಧಿತ ನಡವಳಿಕೆ ನಿಯಮಗಳು, ಸರ್ಕಾರಿ ನೌಕರರು ರಾಜಕೀಯ ಚಟುವಟಿಕೆಗಳಲ್ಲಿ ಮತ್ತು ಚುನಾವಣೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುತ್ತವೆ ಎಂದು ಅದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



