
ಮಧುರೈ: ತಜ್ಞರ ಸಮಿತಿಯ ಶಿಫಾರಸಿನ ಹೊರತಾಗಿಯೂ, ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ನ ತಮಿಳು ಅನುವಾದವನ್ನು ತಮಿಳುನಾಡಿನ ಸಾರ್ವಜನಿಕ ಗ್ರಂಥಾಲಯಗಳು ಖರೀದಿಸಲು ಏಕೆ ನಿರಾಕರಿಸಿದವು ಎಂದು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿದೆ. ಅಲ್ಲದೇ ಮಾರುಕಟ್ಟೆಯಲ್ಲಿಯೇ ಇಲ್ಲದ ಪುಸ್ತಕಗಳ ಪ್ರಕಾಶಕರು 17 ಲಕ್ಷ ರೂ.ಗಳ ಆರ್ಡರ್ಗಳನ್ನು ಪಡೆದಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿತು.
ಸರ್ಕಾರಿ ಗ್ರಂಥಾಲಯಗಳಿಗೆ ಪುಸ್ತಕಗಳ ಖರೀದಿಯಲ್ಲಿ ವ್ಯಾಪಕ ಅಕ್ರಮಗಳನ್ನು ಪರಿಶೀಲಿಸುವಾಗ ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ಎಂ.ಡಿ. ಸುಮತಿ ಅವರಿದ್ದ ವಿಭಾಗೀಯ ಪೀಠವು ನವೆಂಬರ್ 11 ರಂದು ಈ ಅಭಿಪ್ರಾಯವನ್ನು ನೀಡಿದೆ.
ತಜ್ಞರ ಸಮಿತಿಯ ಸದಸ್ಯರೊಬ್ಬರು ನ್ಯಾಯಾಲಯವನ್ನು ಸಂಪರ್ಕಿಸಿ, ಮನ್ ಕಿ ಬಾತ್ನ ತಮಿಳು ಅನುವಾದವಾದ ಮನಥಿನ್ ಕುರಲ್ ಅನ್ನು ಖರೀದಿಸಲು ಶಿಫಾರಸು ಮಾಡಲಾಗಿದೆ ಆದರೆ ನಂತರ ಅದನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದರು ಎಂದು ನ್ಯಾಯಾಧೀಶರು ದಾಖಲಿಸಿದ್ದಾರೆ.
ಮಾಹಿತಿಯನ್ನು ಪರಿಶೀಲಿಸಲು, ಸಾರ್ವಜನಿಕ ಗ್ರಂಥಾಲಯಗಳ ನಿರ್ದೇಶಕ ಆರ್.ವಿ. ಶಾಜೀವನ ಅವರನ್ನು ನ್ಯಾಯಪೀಠ ಪ್ರಶ್ನಿಸಿದೆ. “ನಾವು ಸಾರ್ವಜನಿಕ ಗ್ರಂಥಾಲಯಗಳ ನಿರ್ದೇಶಕರನ್ನು ಎದುರಿಸಿದಾಗ, ಕೇವಲ ಮೌನವಿತ್ತು” ಎಂದು ನ್ಯಾಯಾಲಯ ದಾಖಲಿಸಿದೆ.
ತೆರೆಮರೆಯ ಸಾಧಕ ವ್ಯಕ್ತಿಗಳಿಗೆ ರಾಷ್ಟ್ರೀಯ ಮಟ್ಟದ ಮನ್ನಣೆ ತಂದುಕೊಟ್ಟಿದ್ದಕ್ಕಾಗಿ, ಪ್ರಧಾನ ಮಂತ್ರಿಯವರ ರೇಡಿಯೋ ಕಾರ್ಯಕ್ರಮವನ್ನು ನ್ಯಾಯಮೂರ್ತಿಗಳು ಶ್ಲಾಘಿಸಿದರು. ಥಾಮಸ್ ಗ್ರೇ ಅವರ ಪ್ರಸಿದ್ಧ ಕವಿತೆ ‘ಎಲೆಜಿ ರಿಟನ್ ಇನ್ ಎ ಕಂಟ್ರಿ ಚರ್ಚ್ಯಾರ್ಡ್’ (Elegy Written in a Country Churchyard) ಅನ್ನು ಉಲ್ಲೇಖಿಸಿದ ನ್ಯಾಯಪೀಠವು, ಭಾರತದ ದೂರದ ಮೂಲೆಗಳಲ್ಲಿ ವಾಸಿಸುವ ವ್ಯಕ್ತಿಗಳ ಗಮನಾರ್ಹ ಸಾಧನೆಗಳನ್ನು ‘ಮನ್ ಕಿ ಬಾತ್’ ಕಾರ್ಯಕ್ರಮವು ದೇಶಕ್ಕೆ ಪರಿಚಯಿಸಿದೆ ಎಂದು ಅಭಿಪ್ರಾಯಪಟ್ಟಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



