ನವದೆಹಲಿ: ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಆಸ್ಪತ್ರೆಯ ನೌರಕನೋರ್ವ ತನ್ನ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಯಾವದೇ ಸಂದರ್ಭದಲ್ಲೂ ಯಾರಿಗೂ ತಮ್ಮ ಅನುಮತಿ ಇಲ್ಲದೇ ಮಹಿಳೆಯನ್ನು ಸ್ಪರ್ಶಿಸುವ ಹಕ್ಕಿಲ್ಲ. ಆರೋಪಿಯು ಲೈಂಗಿಕ ಉದ್ದೇಶಕ್ಕಾಗಿಯೇ ವಿದ್ಯಾರ್ಥಿನಿಯನ್ನು ತನ್ನ ಕೊಠಡಿಗೆ ಎಳೆದಿದ್ದು ಅಪರಾಧ. ಇದು ಆಕೆಯ ಗೌರವಕ್ಕೆ ಧಕ್ಕೆ ಉಂಟು ಮಾಡಿರುವುದು ಸೆಕ್ಷನ್ 354ರ ಅಡಿ ದೂರು ದಾಖಲಾಗಿದೆ ಎಂದು ಹೆಚ್ಚುವರಿ ಸೆಕ್ಷನ್ಸ್ ನ್ಯಾಯಾಧೀಶ ವಿರೇಂದರ್ ಭಟ್ ಹೇಳಿದ್ದಾರೆ.
ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಜೈಲು ಹಾಗೂ 5,000 ರೂ. ದಂಡ ಶಿಕ್ಷೆಯ ವಿರುದ್ಧ ಆಸ್ಪತ್ರೆಯಲ್ಲಿ ಸ್ಟೆನೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರೋಪಿ ಅಶೋಕ್ ಕುಮಾರ್ನ ಮನವಿಯನ್ನು ದೆಹಲಿ ಕೋರ್ಟ್ ತಳ್ಳಿ ಹಾಕಿದೆ.
ಆಸ್ಪತ್ರೆಯ ಸಿ.ಟಿ. ಸೆಂಟರ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ರಿಜಿಸ್ಟರ್ ಪುಸ್ತಕವೊಂದನ್ನು ಪರಿಶೀಲಿಸಲು ಆರೋಪಿ ಕುಮಾರ್ನ ಚೇಂಬರ್ಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಲೆತ್ನಿಸಿದ ಸಂದರ್ಭ ವಿದ್ಯಾರ್ಥಿನಿ ತಪ್ಪಿಸಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಫೆ.೨, ೨೦೧೧ರಂದು ಧವಲ ಕೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.