ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ಸಾರ್ವಜನಿ ಕಾರ್ಯಕ್ರಮಗಳನ್ನು ಒಂದೇ ವಾರಕ್ಕೆ ಸೀಮಿತಗೊಳಿಸಲು ನಗರ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ತಿಂಗಳು ಪೂರ್ತಿ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ಭದ್ರತೆ ಒದಗಿಸುವುದು ಕಷ್ಟಸಾಧ್ಯ. ಈ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಲು ಕೇವಲ ಒಂದು ವಾರದ ಕಾಲಾವಕಾಶ ಕಲ್ಪಿಸಿದೆ. ವಾರದ ನಂತರ ಸಾರ್ವಜನಿಕ ಪ್ರದೇಶಗಳ ಬದಲು ಮೈದಾನಗಳಲ್ಲಿ ಮುಂದುವರೆಸುವಂತೆ ತಿಳಿಸಿದೆ.
ಜನನಿಬಿಡ ಪ್ರದೇಶ, ಹಾಗೂ ವಾಹನ ದಟ್ಟಣೆಯಿಂದಾಗಿ ಟ್ರಾಫಿಕ್ ಉಂಟಾಗುತ್ತಿದ್ದು, ಅದರ ನಿವಾರಣೆಯ ದೃಷ್ಟಿಯಿಂದಲೂ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ನಡುವೆ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.