ಮೊಗ್ಗಾ: ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ), ಕೃಷಿ ಕಾರ್ಮಿಕರು ಸೇರಿದಂತೆ ಹಲವು ರೈತ ಸಂಘಟನೆಗಳು ಬೆಳೆ ಹಾನಿ ಪರಿಹಾರ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ನ.4ರಿಂದ 6ರ ವರೆಗೆ ಮತ್ತೆ ಪ್ರತಿಭಟನೆ ಪುನರಾರಂಭಿಸಲು ಮುಂದಾಗಿದ್ದಾರೆ.
ಅಮೃತಸರ ಹಾಗೂ ಮೊಗ್ಗಾ ಪ್ರದೇಶದ ಜಿಲ್ಲಾಡಳಿತ ಸಂಕೀರ್ಣಗಳ ಮುಂಭಾಗದಲ್ಲಿ ಧರಣಿ, ರ್ಯಾಲಿಗಳನ್ನು ನಡೆಸಲಾಗುವುದು ಎಂದು ಕಿಸಾನ್ ಯೂನಿಯನ್ನ ಪ್ರಧಾನ ಕಾರ್ಯದರ್ಶಿಗಳಾದ ಜೋಗಿಂದರ್ ಸಿಂಗ್ ಹಾಗೂ ಸುಖ್ದೇವ್ ಸಿಂಗ್ ತಿಳಿಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಡುವಂತೆ ಈ ಹಿಂದೆ 7 ದಿನಗಳ ’ರೈಲ್ ರೋಕೋ’ ಆಂದೋಲನ ನಡೆಸಿದ್ದರೂ ಪಂಜಾಬ್ ಸರ್ಕಾರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಒಂದು ವೇಳೆ ಸರ್ಕಾರ ವಿಫಲಗೊಂಡಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ನ.7ರಂದು ತುರ್ತು ಸಭೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಹತ್ತಿ ಬೆಳೆಗಳಿಗೆ ಬಿಳಿ ನೊಣ ಕೀಟನಾಶಕದಿಂದ ಹಾನಿ ಉಂಟಾಗಿದ್ದು, ಪ್ರತಿ ಎಕರೆಗೆ 40 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಕೃಷಿ ಕಾರ್ಮಿಕರಿಗೆ 20 ಸಾವಿರ ಹಾಗೂ ಆತ್ಮಹತ್ಯೆಗೈದ ರೈತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಕೋರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.