ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ 124ನೇ ಜನ್ಮ ಜಯಂತಿ ಅಂಗವಾಗಿ ಕೆಲ ದಲಿತ ಸಂಘಟನೆಗಳು ಗುರುವಾರ ದನದ ಮಾಂಸ ಸೇವನೆಯ ಕಾರ್ಯಕ್ರಮವನ್ನು ಆಯೋಜಿಸಿವೆ. ಬೆಂಗಳೂರು ಟೌನ್ಹಾಲ್ನಲ್ಲಿ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಖ್ಯಾತ ಬರಹಗಾರ ಗಿರೀಶ್ ಕಾರ್ನಾಡ್, ಡಾ.ಕೆ. ಮರುಳಸಿದ್ದಪ್ಪ ಸೇರಿದಂತೆ ಹಲವಾರು ಮಂದಿ ಭಾಗಿಯಾಗಲಿದ್ದಾರೆ. ಸಾರ್ವಜನಿಕವಾಗಿ ಇವರು ದನದ ಮಾಂಸವನ್ನು ಭಕ್ಷಣೆ ಮಾಡುವ ಮೂಲಕ ಮಹಾರಾಷ್ಟ್ರ ಸರ್ಕಾರ ಬೀಫ್ ಮೇಲೆ ನಿಷೇಧ ಹೇರಿರುವುದನ್ನು ಖಂಡಿಸಲಿದ್ದಾರೆ.
ಬೀಫ್ ಮೇಲೆ ನಿಷೇಧ ಹೇರಿರುವುದರಿಂದ ಭಾರತದ ವೈವಿಧ್ಯಮಯ ಆಹಾರ ಪದ್ಧತಿಗೆ ಧಕ್ಕೆಯುಂಟಾಗಿದೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಸಿದ್ಧಾಂತಗಳನ್ನು ಜನರ ಮೇಲೆ ಹೇರುತ್ತಿದೆ. ನಾವು ಸಾರ್ವಜನಿಕವಾಗಿ ದನದ ಮಾಂಸ ಸೇವನೆ ಮಾಡಿ ಬಳಿಕ ಸಹಿ ಸಂಗ್ರಹಿಸಿ ಅದನ್ನು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಲಿದ್ದೇವೆ ಎಂದು ಆಯೋಜಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಬಿಜೆಪಿ ಕಟುವಾಗಿ ಖಂಡಿಸಿದ್ದು, ಹಿಂದೂಗಳ ಭಾವನೆಗೆ ಅವಮಾನ ಮಾಡುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆರೋಪಿಸಿದೆ.
ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಕಾನೂನು, ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.