ನವದೆಹಲಿ: ಭಾರತದ ಸಾಂಸ್ಕೃತಿಕ ಕೇಂದ್ರಗಳ ಸ್ಥಾಪನೆಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚುತ್ತಿದು, ’ವಿವಿಧತೆಯಲ್ಲಿ ಏಕತೆ’ ಎಂಬ ಮಂತ್ರ ವಿಶ್ವದಾದ್ಯಂತ ಹೆಗ್ಗಳಿಕೆ ಪಡೆದಿದೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವದ ಮೊದಲ ಆವೃತ್ತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿ, ಸಂಪ್ರದಾಯಗಳಲ್ಲಿ ವಿದೇಶಿಗರು ಹೆಚ್ಚು ಉತ್ಸಾಹ ತೋರುತ್ತಿದ್ದು, ಭಾರತದ ಏಕತೆ ಜನರನ್ನು ಆಕರ್ಷಿಸುತ್ತಿದೆ ಎಂದು ಹೇಳಿದ್ದಾರೆ.
ಸ್ವದೇಶಕ್ಕಿಂತ ವಿದೇಶಗಳಲ್ಲೇ ಭಾರತೀಯ ಸಂಸ್ಕೃತಿಯ ಬಗ್ಗೆ ಜನರು ಉತ್ಸಾಹ ತೋರುತ್ತಿದ್ದು, ಪ್ರಧಾನಿ ಮೋದಿಯವರ ಮಧ್ಯ ಏಷ್ಯಾ ರಾಷ್ಟ್ರಗಳ ಭೇಟಿ ಸಂದರ್ಭ ಆ ರಾಷ್ಟ್ರಗಳು ಭಾರತೀಯ ಸಾಂಸ್ಕೃತಿಕ ಕೇಂದ್ರಗಳನ್ನು ಸ್ಥಾಪಿಸುವ ಬೇಡಿಕೆ ವ್ಯಕ್ತಪಡಿಸಿವೆ ಎಂದಿದ್ದಾರೆ.
ಈ ವೇಳೆ ಉಪಸ್ಥಿತರಿದ್ದ ಬಿಜೆಪಿ ಕಾನೂನು ಸಚಿವೆ ಮೀನಾಕ್ಷಿ ಲೇಖಿ, ಭಾರತವು ಜಾಗತಿಕವಾಗಿ ತನ್ನ ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಆದರೆ ಭಾರತೀಯ ಪರಂಪರೆಯನ್ನು ಘಾಸಿಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ಆಯೋಜಿಸಲಾಗಿದ್ದ 7 ದಿನಗಳ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಅವರು, ವಿವಿಧತೆಯ ನಡುವೆಯೂ ಭಾರತವು ಏಕತೆಯಿಂದ ಗುರುತಿಸಿಕೊಂಡಿದೆ. ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇನ್ನಷ್ಟು ಉನ್ನತ ಸ್ಥಾನಕ್ಕೆ ಏರಲಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.