ಅಲಹಾಬಾದ್: ರಾಷ್ಟ್ರೀಯ ನ್ಯಾಯಾಂಗ ನೇಮಕಾತಿಗಳ ಆಯೋಗ(ಎನ್ಜಿಎಸಿ) ಕುರಿತ ಸುಪ್ರೀಂ ಕೋರ್ಟ್ನ ತೀರ್ಮಾನವನ್ನು ಟೀಕಿಸಿದ್ದಕ್ಕಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧ ಮಾಹೋಬಾ ನ್ಯಾಯಾಲಯ ನೀಡಿದ್ದ ಸಮನ್ಸ್ ಅನ್ನು ಅಲಹಾಬಾದ್ ಹೈಕೋರ್ಟ್ ರದ್ದುಗೊಳಿಸಿದೆ.
ಅ.19 ರಂದು ಸಮನ್ಸ್ ಜಾರಿಗೊಳಿಸಲಾಗಿತ್ತು. ಜೇಟ್ಲಿ ಪರ ವಕೀಲರಾದ ಮಣಿಂದರ್ ಸಿಂಗ್ ಅವರು ಸಮನ್ಸ್ ಜಾರಿಗೊಳಿಸಿರುವುದು ನ್ಯಾಯಾಂಗದ ದುರುಪಯೋಗ ಮಾಡಿದಂತಾಗಿದೆ ಎಂದು ಆಪಾದಿಸಿದ್ದರು. ಇದೀಗ ಹೈಕೋರ್ಟ್ ಈ ಆಪಾದನೆಯನ್ನು ತಿರಸ್ಕರಿಸಿದೆ ಎಂದು ನ್ಯಾ. ನಳಿನ್ ಕೊಹ್ಲಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಸ್ಥಾಪಿತ ಎನ್ಜಿಎಸಿ ಕುರಿತ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಜೇಟ್ಲಿ ಅವರು ಟೀಕಿಸಿರುವ ಬಗ್ಗೆ ಮಾಧ್ಯಮ ವರದಿಗಳನ್ನು ಗಮನಿಸಿದ ಕಲ್ಪಹಾರ್ ಸಿವಿಲ್ ನ್ಯಾ. ಅಂಕಿತ್ ಗೋಯೆಲ್, ಜೇಟ್ಲಿ ವಿರುದ್ಧ ಸಮನ್ಸ್ ಜಾರಿಗೊಳಿಸಿ ಮಹೋಬಾ ನ್ಯಾಯಾಲಕ್ಕೆ ಒಪ್ಪಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.