ಮೂಡುಬಿದಿರೆ : ಮೂಡುಬಿದಿರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವು ಕಳೆದ 12 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಆಳ್ವಾಸ್ ನುಡಿಸಿರಿ ನ. 26ರಿಂದ 29ವರೆಗೆ ಮೂಡುಬಿದಿರೆಯ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಜರುಗಲಿದೆ ಎಂದು ಡಾ| ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಈ ಬಾರಿಯ ಸಮ್ಮೇಳನದ ಸಭಾಧ್ಯಕ್ಷತೆಯನ್ನು ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಯವರು ವಹಿಸಲಿದ್ದು, ಆಳ್ವಾಸ್ ನುಡಿಸಿರಿ 2015ರ ಉದ್ಘಾಟನೆಯನ್ನು ಡಾ.ವೀಣಾ
ಶಾಂತೇಶ್ವರ ನೇರವೇರಿಸಲಿದ್ದಾರೆ.
ಆಳ್ವಾಸ್ ನುಡಿಸಿರಿ ಉದ್ಘಾಟನೆಗೆ ನೂತನ ವೇದಿಕೆ : ನ. 26 ರಂದು ಸಂಜೆ 6 ಗಂಟೆಗೆ ಆಳ್ವಾಸ್ ನುಡಿಸಿರಿಯ ಉದ್ಘಾಟನೆಯು ನೂತನವಾಗಿ ನಿರ್ಮಾಣವಾದ ವೇದಿಕೆಯಲ್ಲಿ ನಡೆಯಲಿದೆ. ಸುಮಾರು 20,000 ಪ್ರೇಕ್ಷಕರು ಕೂರಹುದಾದ ಬೃಹತ್ ಸಭಾಂಗಣವು ನಿರ್ಮಿಸಿದ್ದು ನ.27, 28, 29 ರಂದು ‘ಕರ್ನಾಟಕ: ಹೊಸತನದ ಹುಡುಕಾಟ’ ಎನ್ನುವ ಪ್ರಧಾನ ಪರಿಕಲ್ಪನೆಯಲ್ಲಿ ವಿವಿಧ ಗೋಷ್ಠಿಗಳು, ಸಂಸ್ಮರಣೆ, ಕವಿಸಮಯ-ಕವಿನಮನ, ವಿಶೇಷ ಉಪನ್ಯಾಸಗಳು ರತ್ನಾಕರವರ್ಣಿ ವೇದಿಕೆಯ ನುಡಿಸಿರಿ ಸಭಾಂಗಣದಲ್ಲಿ ನಡೆಯಲಿವೆ. ನ.29ರಂದು 3 ಗಂಟೆಗೆ ಸಮಾರೋಪ ಸಮಾರಂಭವು ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.