ನವದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಪ್ರಮುಖ ಆರೋಪಿ ಯಾಕುಬ್ ಅಬ್ದುಲ್ ರಝಾಕ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ಮೂಲಕ ಆತನಿಗೆ ನೀಡಿರುವ ಮರಣ ದಂಡನೆ ಶಿಕ್ಷೆಯನ್ನು ಖಾಯಂಗೊಳಿಸಿದೆ.
ಯಾಕುಬ್ಗೆ ಕೆಳ ನ್ಯಾಯಾಲಯ ನೀಡಿದ್ದ ಮರಣದಂಡನೆಯ ಶಿಕ್ಷೆಯ ತೀರ್ಪನ್ನು ಮಾ.21, 2013ರಂದು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು. ಬಳಿಕ ಆತ ತೀರ್ಪನ್ನು ಪುನರ್ ಪರಿಶೀಲನೆ ನಡೆಸುವಂತೆ ಸುಪ್ರೀಂಗೆ ಅರ್ಜಿ ಹಾಕಿದ್ದ. ಈ ಹಿನ್ನಲೆಯಲ್ಲಿ 2014ರ ಜೂನ್ನಲ್ಲಿ ಆತನ ಮರಣದಂಡನೆಗೆ ತಡೆ ನೀಡಲಾಗಿತ್ತು. ಇದೀಗ ಆತನ ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ ಆತನ ಮರಣದಂಡನೆಯನ್ನು ಖಾಯಂಗೊಳಿಸಲಾಗಿದೆ.
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರೂ ಈತನ ಕ್ಷಮಾಧಾನ ಅರ್ಜಿಯನ್ನು ಮಹಾರಾಷ್ಟ್ರದ ಸರ್ಕಾರ ಮತ್ತು ಗೃಹಸಚಿವಾಲಯದ ಮನವಿಯ ಮೇರೆಗೆ ಈಗಾಗಲೇ ತಿರಸ್ಕರಿಸಿದ್ದಾರೆ.
1993ರಲ್ಲಿ ಮುಂಬಯಿಯಲ್ಲಿ 13 ಕಡೆ ನಡೆದ ಸರಣಿ ಸ್ಫೋಟದಲ್ಲಿ 257 ಮಂದಿ ಬಲಿಯಾಗಿದ್ದರು, ಅಲ್ಲದೇ ಹಲವಾರು ಮಂದಿ ಗಾಯಗೊಂಡಿದ್ದರು.ದಾವೂದ್ ಸಹಚರರಾದ ಯಾಕೂಬ್ ಮತ್ತಿತರರು ಈ ಘಟನೆಯ ಆರೋಪಿಗಳೆಂದು ತನಿಖೆಯಿಂದ ಬಳಿಕ ತಿಳಿದು ಬಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.