ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹೋದರಿ ಶೈಲಜಾ ಅವರು ಮೃತರಾಗಿದ್ದಾರೆ.
ಹಲವಾರು ರೀತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನ ಕುಂಬಳಗೋಡಿನ ರಾಮಸಂದ್ರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಗರ್ಭ ಶ್ರೀಮಂತೆ ಜಯಲಲಿತಾ ಅವರ ಸಹೋದರಿಯಾದರೂ ಕಡು ಬಡತನದಲ್ಲೇ ಶೈಲಜಾ ಅವರು ಜೀವನ ಕಳೆದಿದ್ದರು. ಜಯಲಲಿತಾರನ್ನು ತನ್ನ ಅಕ್ಕ ಎಂದು ಶೈಲಜಾ ಒಪ್ಪಿಕೊಂಡಿದ್ದರೂ ಜಯಲಲಿತಾ ಮಾತ್ರ ಈಕೆಯನ್ನು ತನ್ನ ತಂಗಿ ಎಂದು ಒಪ್ಪಿಕೊಂಡಿರಲಿಲ್ಲ. ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯಗಳು ಕೊನೆಯವರೆಗೂ ಮುಂದುವರೆದೇ ಬಂದಿತ್ತು.
ಹಲವಾರು ಬಗೆಯ ಅನಾರೋಗ್ಯದಿಂದ ಬಳಲುತ್ತಿದ್ದ ಶೈಲಜಾ ಅವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಕುಟುಂಬದ ಬಳಿ ಹಣವಿರಲಿಲ್ಲ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.