ಪ್ಯಾರಿಸ್: ಬೆಲ್ಜಿಯಂನ ಅಬ್ಡೆಲ್ ಹಮೀದ್ ಅಬೌಡ್ ಪ್ಯಾರಿಸ್ನಲ್ಲಿ ಇಸಿಸ್ ಉಗ್ರರು ನಡೆಸಿದ್ದ ದಾಳಿಯ ಮಾಸ್ಟರ್ ಮೈಂಡ್ ಎಂದು ಫ್ರೆಂಚ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ವಿಷಯವನ್ನು ಫ್ರಾನ್ಸ್ನ ಆಂತರಿಕ ಸಚಿವ ಬರ್ನಾಡ್ ಕ್ಯಾಜೆನ್ಯುವೆ ತಿಳಿಸಿದ್ದಾರೆ.
ಯುರೋಪ್ನಾದ್ಯಂತ ಇನ್ನಷ್ಟು ದಾಳಿ ನಡೆಸುವ ಸಾಧ್ಯತೆ ಇರಬಹುದು ಎಂಬ ಹಿನ್ನೆಲೆಯಲ್ಲಿ ಫ್ರಾನ್ಸ್ ಪೊಲೀಸರು ಇಂದು ಸುಮಾರು 150 ಕ್ಕೂ ಅಧಿಕ ಕಡೆಗಳಲ್ಲಿ ದಾಳಿಗಳನ್ನು ನಡೆಸಿ ಇಸಿಸ್ ಉಗ್ರರು ಶೇಖರಿಸಿಟ್ಟಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಎಕೆ-47, ರಾಕೆಟ್ ಲಾಂಚರ್ ಸೇರಿದಂತೆ ಅನೇಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆಲ ಆತ್ಮಹತ್ಯಾ ಬಾಂಬರ್ಗಳಿಗೆ ಬೆಲ್ಜಿಯಂ ಇಸಿಸ್ ಉಗ್ರರ ಜೊತೆ ಸಂಪರ್ಕ ಇದೆ ಎಂದೂ ಶಂಕಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.