ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ 5ನೇ ಬಾರಿಗೆ ಜೆಡಿಯು ಮುಖಂಡ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಶುಕ್ರವಾರ ಮಧ್ಯಾಹ್ನ ನಗರದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ರಾಮ್ನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದರು.
ನಿತೀಶ್ ಕುಮಾರ್ ಅವರೊಂದಿಗೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಮಗನಾದ ತೇಜಶ್ವಿ ಯಾದವ್ ಹಾಗೂ ತೇಜ್ ಪ್ರತಾಪ್ ಯಾದವ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸಂದರ್ಭದಲ್ಲಿ ತೇಜ್ ಪ್ರತಾಪ್ ಯಾದವ್ ಅಪೇಕ್ಷಿತ(ನಿರೀಕ್ಷೀತ) ಎಂಬ ಶಬ್ದವನ್ನು ಉಪೇಕ್ಷಿತ(ನಿರ್ಲಕ್ಷ್ಯಿತ) ಎಂದು ತಪ್ಪಾಗಿ ಓದಿದ್ದು ರಾಜ್ಯಪಾಲರು ಅದನ್ನು ಸರಿಪಡಿಸಿದ ಘಟನೆ ನಡೆಯಿತು.
ಇನ್ನುಳಿದಂತೆ ರಾಮ್ ವಿಚಾರ್ ರೈ, ಶಿವಚಂದ್ರ ರಾಮ್, ಶೈಲೇಶ್ ಕುಮಾರ್, ಮಂಜು ವರ್ಮಾ ಮತ್ತು ಸಂತೋಷ್ ನಿರಳ, ಅಲೋಕ್ ಕುಮಾರ್, ಜೈ ಕಮಾರ್ ಸಿಂಗ್, ಬಿಜೇಂದ್ರ ಪ್ರಸಾದ್ ಯಾದವ್, ಅಬ್ದುಲ್ ಬರಿ ಸಿದ್ದಿಖೀ ಅವರುಗಳು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಪಕ್ಷದ ಪ್ರಮುಖರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜ್ಯಗಳ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.