ಮಾಯನ್ಮಾರ್ : ಉತ್ತರ ಮಯನ್ಮಾರ್ನ ಜೇಡ್ ಗಣಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಸುಮಾರು 100 ಜನರು ಸಾವನ್ನಪ್ಪಿರುವುದಾಗಿ ಮೂಲಗಳು ತಿಳಿಸಿವೆ.
ಈಗಾಗಲೇ 100 ಶವಗಳನ್ನು ಮೇಲಕ್ಕೆ ತೆಗೆಯಲಾಗಿದ್ದು, ಮಣ್ಣಿನ ಅವಶೇಷಗಳಡಿ ಇನ್ನಷ್ಟು ಜನರು ಸಿಲುಕಿರಬಹುದೆಂದು ಶಂಕಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ೧೫೦ಕ್ಕೂ ಅಧಿಕ ಸೈನಿಕರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಭೂಕುಸಿತಕ್ಕೆ ನಿಖರ ಕಾರಣ ತಿಳಿದಿಲ್ಲವಾದರೂ, ಗಣಿಗಾರಿಕೆಯಿಂದ ಗುಡ್ಡದ ಬುಡದಲ್ಲಿರುವ ಮಣ್ಣು ಸಡಿಲಗೊಂಡು ಭೂಕುಸಿತ ಸಂಭವಿಸಿರಬಹುದೆಂದು ಅಭಿಪ್ರಾಯಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.