ಬಂಟ್ವಾಳ : ಉತ್ತಮ ಆರೋಗ್ಯ, ಶಿಸ್ತು ಮತ್ತು ಸಂಸ್ಕಾರಯುತವಾದ ಶಿಕ್ಷಣ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರ ಸಿಗಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಹೇಳಿದರು.
ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಸಮನ್ವಯ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಕೈಕುಂಜೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ಹೆಚ್ಚು ಕ್ರೀಯಾಶೀಲರಾಗಲು ಅಂಗನವಾಡಿ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ವೇದಿಕೆಯಲ್ಲಿ ಪುರಸಭಾ ಸದಸ್ಯೆ ಸುಗುಣ ಕಿಣಿ, ಪ್ರಮುಖರಾದ ರಮೇಶ್ ಸಾಲ್ಯಾನ್, ಶಿವರಾಜ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.