ನವದೆಹಲಿ: 2012ರ ದೆಹಲಿ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪ್ರಾಪ್ತ ಆರೋಪಿಯ ಶಿಕ್ಷೆಯ ಅವಧಿ ಮುಕ್ತಾಯಗೊಂಡಿದೆ. ಡಿ.22ರಂದು ಆತ ಬಿಡುಗಡೆಯಾಗಬೇಕಿದೆ. ಆದರೆ ಸದ್ಯಕ್ಕೆ ಆತನನ್ನು ಬಿಡುಗಡೆ ಮಾಡುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿ ಆತನನ್ನು ಪೊಲೀಸರು ಎನ್ಜಿಓವೊಂದರ ಸುಪರ್ದಿಗೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಪ್ರಾಪ್ತ ಎಂಬ ಕಾರಣಕ್ಕೆ ಕಠಿಣ ಶಿಕ್ಷೆಯಿಂದ ಪಾರಾಗಿದ್ದ ಈತನನ್ನು ರಿಮಾಂಡ್ ಹೋಂನಲ್ಲಿ ಇಡಲಾಗಿತ್ತು. ಇದೀಗ ಅದರ ಅವಧಿ ಮುಕ್ತಾಯವಾಗಿದೆ. ಆದರೆ ಈತನನ್ನು ಬಿಡುಗಡೆ ಮಾಡಿದರೆ ಆತ ಮತ್ತಷ್ಟು ಕ್ರೂರಿಯಾಗಬಹುದು ಅಥವಾ ಈತ ಸಮಾಜದ ನಿಂದನೆಗೆ ಗುರಿಯಾಗಬಹುದು ಎಂಬ ಕಾರಣಕ್ಕೆ ಆತನನ್ನು ಎನ್ಜಿಓದಲ್ಲಿ ಇಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.
ಅಪ್ರಾಪ್ತ ಅಪರಾಧಿಯ ಬಿಡುಗಡೆಗೆ ಮೃತ ಯುವತಿಯ ಪೋಷಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಮ್ಮ ಮಗಳ ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.