ಬೆಳಗಾವಿ : ಭೂಗತ ಪಾತಕಿ ಬನ್ನಂಜೆ ರಾಜನ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಲಾಗಿದೆ.
ಬೆಳಗಾವಿಯ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಈತನನ್ನು ಇತ್ತೀಚಿಗೆ ಮೊರಾಕ್ಕೊದಲ್ಲಿ ಬಂಧಿಸಲಾಗಿತ್ತು.
ಬನ್ನಂಜೆ ರಾಜನ ಗುಂಪಿನಿಂದಲೇ ಆತನಿಗೆ ಜೀವ ಬೆದರಿಕೆ ಇರುವ ಕಾರಣ ಆತನ್ನನ್ನು ಹೆಚ್ಚಿನ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಅಲ್ಲದೇ ನ್ಯಾಯಾಲಯದ ಸುತ್ತಲೂ ಬಿಗಿಭದ್ರತೆ ಏರ್ಪಡಿಸಲಾಗಿತ್ತು.
ಅಂಕೋಲ ಉದ್ಯಮಿ ಆರ್.ಎನ್. ನಾಯ್ಕ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬನ್ನಂಜೆ ರಾಜನನ್ನು ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.