ನವದೆಹಲಿ: ದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರಾಜ್ಯಗಳ ಸಹಕಾರವನ್ನು ಪಡೆಯುತ್ತಿದೆ. ರಾಜ್ಯಗಳು ಜವಾಬ್ದಾರಿಯ ಹೆಗಲು ಕೊಟ್ಟಾಗ ಮಾತ್ರ ದೇಶದ ಪ್ರಗತಿ ಸಾಧ್ಯ, ಕೇಂದ್ರ ಒಂದರಿಂದಲೇ ಏನೂ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಶುಕ್ರವಾರ ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಸಮಿತ್ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಭಾರತದ ಪ್ರಗತಿಯಲ್ಲಿ ರಾಜ್ಯಗಳಿಗೆ ಬಹುಮುಖ್ಯ ಪಾತ್ರವಿದೆ, ನಾವು ಹೆಗಲಿಗೆ ಹೆಗಲು ಕೊಟ್ಟು ಜೊತೆಯಾಗಿ ನಡೆದರೆ ಪ್ರತಿಫಲ ತನ್ನಿಂದ ತಾನೇ ಸಿಗುತ್ತದೆ’ ಎಂದರು.
ಅಲ್ಲದೇ ನಮ್ಮ ರಾಜ್ಯಗಳ ಬಗ್ಗೆ ಮತ್ತು ಅದರ ಸಾಮರ್ಥ್ಯ ಬಗ್ಗೆ ಜಗತ್ತು ತಿಳಿದುಕೊಳ್ಳುವಂತೆ ಮಾಡುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದರು.
ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ಇರುವುದು ದೇಶದ ಪ್ರಗತಿಗೆ ಅತ್ಯಗತ್ಯ. ಗೊಂದಲಮಯ ಫಲಿತಾಂಶ ಬಂದಾಗ ದೇಶ ಅಸ್ಥಿರಗೊಳುತ್ತದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.