ನವದೆಹಲಿ: ಕಳೆದ ಸೆಪ್ಟೆಂಬರ್ 2014ರಿಂದ ಅಕ್ಟೋಬರ್ 2015ರ ಒಂದು ವರ್ಷದ ಅವಧಿಯಲ್ಲಿ ಭಾರತವು 32.87 ಬಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆ(ಎಫ್ಡಿಐ) ಪಡೆದಿದೆ ಎಂದು ಹೇಳಲಾಗಿದೆ. ಈ ಅವಧಿಯಲ್ಲಿ ಎಫ್ಡಿಐ ಆಕರ್ಷಿತ ಕ್ಷೇತ್ರಗಳೆಂದರೆ ಕಂಪ್ಯೂಟರ್ ತಂತ್ರಾಂಶ ಮತ್ತು ಯಂತ್ರಾಂಶ, ಸೇವಾ ಕ್ಷೇತ್ರ, ವ್ಯಾಪಾರ, ವಾಹನ, ನಿರ್ಮಾಣ ಕಾಮಗಾರಿಗಳು, ರಾಸಾಯನಿಕ, ಔಷಧ, ಕೈಗಾರಿಕಾ ಯಂತ್ರೋಪಕರಣಗಳು ಸೇರಿವೆ.
ರಕ್ಷಣಾ ಮತ್ತು ರೈಲ್ವೆಗೆ ಸಂಬಂಧಿಸಿದಂತೆ ಈ ಅವಧಿಯಲ್ಲಿ ಭಾರತವು 0.08 ಮಿಲಿಯನ್ ಹಾಗೂ 23.2 ಮಿಲಿಯನ್ ಡಾಲರ್ ಎಫ್ಡಿಐ ಪಡೆದಿದ್ದು, ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ 70.75 ಮಿಲಿಯನ್ ಡಾಲರ್ ಎಫ್ಡಿಐ ಪಡೆದಿದೆ.
ಮೇಕ್ ಇನ್ ಇಂಡಿಯಾ ಯೋಜನೆಯನ್ನು ಕಳೆದ ಸೆಪ್ಟೆಂಬರ್ 2014ರಲ್ಲಿ ಬಿಡುಗಡೆಗೊಳಿಸಲಾಗಿದ್ದು, ಭಾರತವನ್ನು ಹೂಡಿಕೆಯ ತಾಣ ಹಾಗೂ ಉತ್ಪಾದನೆ, ವಿನ್ಯಾಸ ಮತ್ತು ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಉತ್ತೇಜಿಸುವ ಗುರಿ ಹೊಂದಿದೆ. ಮೇಕ್ ಇನ್ ಇಂಡಿಯಾ ಹೂಡಿದಾರರ ಮೇಲೆ ಪರಿಣಾಮ ಬೀರಿದ್ದು, ಹೂಡಿಕೆದಾರರು ಸಕಾರಾತ್ಮಕವಾಗಿ ಹೂಡಿಕೆ ಮಾಡಿದ್ದಾರೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸಿಸ್ಕೊ, ಕ್ವಾಂಟಾ, ಎಲ್ಜಿ, ಸ್ಯಾಮ್ಸಂಗ್, ಕ್ಸಿಯೊಮಿ, ಏರ್ಬಸ್, ಸಾಫ್ಟ್ಬ್ಯಾಂಕ್ ಸೇರಿದಂತೆ ಹಲವಾರು ಕಂಪೆನಿಗಳು ಭಾರತದಲ್ಲಿ ಹೂಡಿಕೆ ಮಾಡುವ ಕುರಿತು ಘೋಷಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.