ಕರಾಚಿ: ಪ್ರಸ್ತಾಪಗೊಂಡಿರುವ ಭಾರತ-ಪಾಕಿಸ್ಥಾನ ಕ್ರಿಕೆಟ್ ಸರಣಿಗೆ ಮುಂದಿನ ಎರಡು ದಿನಗಳೊಳಗೆ ಭಾರತ ಸರ್ಕಾರ ಅನುಮೋದನೆ ನೀಡದೇ ಹೋದರೆ ಈ ಬಗೆಗಿನ ಮಾತುಕತೆಗೆ ಅಂತ್ಯ ಹಾಡುವುದಾಗಿ ಪಾಕಿಸ್ಥಾನ ಕ್ರಿಕೆಟ್ ಮಂಡಳಿ ತಿಳಿಸಿದೆ.
ಭಾರತದ ವಿದೇಶಾಂಗ ಸಚಿವೆ ಮತ್ತು ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಅವರ ನಡುವೆ ನಡೆದ ಮಾತುಕತೆಯಲ್ಲಿ ಕ್ರಿಕೆಟ್ ಬಗ್ಗೆ ಪ್ರಸ್ತಾಪವಾಗಿಲ್ಲ, ಹೀಗಾಗಿ ಸರಣಿ ನಡೆಯುವ ಸಾಧ್ಯತೆ ಕಡಿಮೆಯಿದೆ. ಭಾರತದ ಅನುಮೋದನೆ ಇನ್ನು ಎರಡು ದಿನ ಕಾಯುತ್ತೇವೆ, ಬಳಿಕ ಮಾತುಕತೆಯನ್ನೇ ಕೈ ಬಿಡುತ್ತೇವೆ ಎಂದು ಪಿಸಿಬಿ ಮುಖ್ಯಸ್ಥ ಶಹರ್ಯಾರ್ ಖಾನ್ ತಿಳಿಸಿದ್ದಾರೆ.
ಇನ್ನೊಂದೆಡೆ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು, ಗಡಿಯಲ್ಲಿ ಯೋಧರು ಸಾಯುತ್ತಿರುವಾಗ ಪಾಕಿಸ್ಥಾನದೊಂದಿಗೆ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಈ ಹಿಂದೆ ಭಾರತ-ಪಾಕ್ ನಡುವಣ ಸರಣಿಯನ್ನು ಅವರು ಬಲವಾಗಿ ಸಮರ್ಥಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.