ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಸಿಬಿಐ 3 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಂಡಿದೆ. ಅದಕ್ಕೂ ಮೊದಲು 2.5 ಲಕ್ಷವನ್ನು ವಶಪಡಿಸಿಕೊಳ್ಳಲಾಗಿತ್ತು.
ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪ ಹೊತ್ತಿರುವ ರಾಜೇಂದ್ರ ಮತ್ತು ಇತರ 6 ಆರೋಪಿಗಳ ಮನೆ, ಕಛೇರಿ ಸೇರಿದಂತೆ ಒಟ್ಟು 16 ಕಡೆ ಇಂದು ಸಿಬಿಐ ದಾಳಿಯಾಗಿದೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಈ ದಾಳಿಗಳು ನಡೆದಿದೆ.
ಕಂಪ್ಯೂಟರ್ ಖರೀದಿ ಮತ್ತು ವಿವಿಧ ಕಂಪನಿಗಳಿಗೆ ಟೆಂಡರ್ ನೀಡುವಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ ರಾಜೇಂದ್ರ ಕುಮಾರ್ ಅವರ ಮೇಲಿದೆ.
ಈ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡಿರುವ ಎಎಪಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.