ನವದೆಹಲಿ: ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಜಿಹಾದಿ ಸಂಘಟನೆಗಳಿಗೆ ಸೇರಿದ ಇಬ್ಬರು ಶಂಕಿತ ಉಗ್ರರನ್ನು ಮಂಗಳವಾರ ದೆಹಲಿಯಲ್ಲಿ ಬಂಧಿಸಲಾಗಿದೆ.
ಈ ಶಂಕಿತರು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಗೆ ಸೇರಿದವರು ಎನ್ನಲಾಗಿದೆ, ಆದರೆ ಇವರು ಯಾವ ಜಿಹಾದಿ ಸಂಘಟನೆಗೆ ಸೇರಿದವರು ಎಂಬುದನ್ನು ತಿಳಿಸಲು ಪೊಲೀಸರು ನಿರಾಕರಿಸಿದ್ದಾರೆ.
ಹಿಂದಿನಿಂದಲೂ ಈ ಶಂಕಿತರ ಮೇಲೆ ವಿಶೇಷ ದಳದ ಪೊಲೀಸರು ಕಣ್ಗಾವಲು ಇಟ್ಟಿದ್ದರು, ಆದರೆ ಎರಡು ವರ್ಷಗಳ ಹಿಂದೆ ಇವರು ಇದಕ್ಕಿದ್ದಂತೆ ಕಾಣೆಯಾಗಿದ್ದರು. ಗಡಿಯನ್ನು ದಾಟಿ ಪಾಕ್ ಮತ್ತು ಅಫ್ಘಾನಿಸ್ತಾನದಲ್ಲಿ ಉಗ್ರ ತರಬೇತಿಯನ್ನು ಪಡೆಯುತ್ತಿದ್ದರು, ಇದೀಗ ಭಾರತಕ್ಕೆ ಬಂದು ಭಯೋತ್ಪಾದನ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.
ಇದೀಗ ವಿಶೇಷ ಭದ್ರತಾ ಪಡೆಗಳು ಉತ್ತರಪ್ರದೇಶ ಸೇರಿದಂತೆ ವಿವಿಧೆಡೆ ಶೋಧ ಕಾರ್ಯ ಆರಂಭಿಸಿ ಜಿಹಾದಿ ಸಂಘಟನೆಗಳ ಜಾಡು ಪತ್ತೆಹಚ್ಚಲು ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.