ನವದೆಹಲಿ: 2004ರಲ್ಲಿ ಮನಮೋಹನ್ ಸಿಂಗ್ ಅವರ ಬದಲಿಗೆ ಪ್ರಣವ್ ಮುಖರ್ಜಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದರೆ 2014ರಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತಿರಲಿಲ್ಲ ಎಂದು ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಣವ್ ಅವರ ಬದಲಿಗೆ ಸಿಂಗ್ ಅವರನ್ನು ಆಯ್ಕೆ ಮಾಡಿದ್ದು ಕಾಂಗ್ರೆಸ್ಸಿಗರಿಗೆ ಮಾತ್ರವಲ್ಲ ಹೊರಗಿನವರಿಗೂ ದೊಡ್ಡ ಆಶ್ಚರ್ಯ ಉಂಟುಮಾಡಿತ್ತು. ಪ್ರಣವ್ ಆಯ್ಕೆಯಾಗಿದ್ದರೆ 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೀನಾಯ ಪರಿಸ್ಥಿತಿ ಒದಗುತ್ತಿರಲಿಲ್ಲ ಎಂಬ ಅಭಿಪ್ರಾಯ ಹಲವರದ್ದು ಎಂದು ಖುರ್ಷಿದ್ ಹೇಳಿದ್ದಾರೆ.
ತಮ್ಮ ‘ತಮ್ಮ ದಿ ಅದರ್ ಸೈಡ್ ಆಫ್ ಮೌಂಟೇನ್’ನಲ್ಲಿ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಗಂಭೀರವಾದ ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಡಾ.ಸಿಂಗ್ ಅವರು ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಗೇಮ್ ಚೇಂಜರ್ ಆಗಿ ಕಾರ್ಯನಿರ್ವಹಿಸಿದ್ದಾರೆ, ಇದನ್ನು ಇಡೀ ದೇಶವೇ ಕೊಂಡಾಡಿದೆ ಎಂಬುದನ್ನು ಯಾರೂ ಮರೆಯುವಂತಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.