ನವದೆಹಲಿ: ಸಂಪ್ರದಾಯದಂತೆ ಈ ಬಾರಿಯ ಗಣರಾಜ್ಯೋತ್ಸವಕ್ಕೂ ವಿದೇಶಿ ಅತಿಥಿಯೋರ್ವರು ಆಗಮಿಸಲಿದ್ದಾರೆ. 2016, ಜ.26ರಂದು ನಡೆಯುವ ಗಣರಾಜ್ಯೋತ್ಸವದ ಪೆರೇಡ್ನಲ್ಲಿ ಮುಖ್ಯ ಅತಿಥಿಗಳಾಗಿ ಫ್ರಾನ್ಸ್ ಅಧ್ಯಕ್ಷ ಫ್ರಾನ್ಸಿಸ್ ಹೋಲ್ಯಾಂಡೆ ಭಾಗವಹಿಸಲಿದ್ದಾರೆ.
ಫ್ರಾನ್ಸಿಸ್ ಅವರು ಈ ಬಾರಿಯ ಮುಖ್ಯ ಅತಿಥಿ ಎಂಬುದನ್ನು ವಿದೇಶಾಂಗ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಟ್ವಿಟರ್ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ.
‘ಹೋಲ್ಯಾಂಡೆ ಅವರು ನಮ್ಮ ಆಹ್ವಾನವನ್ನು ಸ್ವೀಕರಿಸಿದ್ದು, ಭಾರತೀಯ ಸೇನೆಯ ಗೌರವವನ್ನು ಪಡೆದುಕೊಳ್ಳಲಿದ್ದಾರೆ. ಅವರ ಭೇಟಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಸಲಿದೆ ಎಂಬ ಭರವಸೆ ಇದೆ’ ಎಂದಿದ್ದಾರೆ.
ಕಳೆದ ವರ್ಷ ಅಮೆರಿಕ ಅಧ್ಯಕ್ಷ ಒರಾಕ್ ಒಬಾಮ ಅವರು ಗಣರಾಜ್ಯೋತ್ಸವದ ಅತಿಥಿಯಾಗಿ ಆಗಮಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.