ವಾಷಿಂಗ್ಟನ್: ತನ್ನ ನೆಲದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿರುವ, ಭಾರತ ಮತ್ತು ಅಫ್ಘಾನಿಸ್ತಾನಕ್ಕೆ ಬೆದರಿಕೆಯೊಡ್ಡುತ್ತಿರುವ ಉಗ್ರ ಸಂಘಟನೆಗಳ ವಿರುದ್ಧ ಪಾಕಿಸ್ಥಾನ ಕ್ರಮಕೈಗೊಳ್ಳುತ್ತಿಲ್ಲ ಎಂದು ಅಮೆರಿಕಾ ಹೇಳಿದೆ.
‘ಪಾಕಿಸ್ಥಾನ ತನಗೆ ಬೆದರಿಕೆಯೊಡ್ಡುತ್ತಿರುವ ತೆಹ್ರೀಕ್-ಇ-ತಾಲಿಬಾನ್ ವಿರುದ್ಧವೇ ಹೆಚ್ಚು ಗಮನ ಹರಿಸುತ್ತಿದೆಯೇ ಹೊರತು ಭಾರತ, ಅಫ್ಘಾನಿಸ್ತಾನಕ್ಕೆ ಸವಾಲೊಡ್ಡುತ್ತಿರುವ ಇತರ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲ’ ಎಂದು ಪಾಕ್ ಮತ್ತು ಅಫ್ಘಾನಿಸ್ತಾನದಲ್ಲಿನ ಅಮೆರಿಕಾದ ವಿಶೇಷ ಪ್ರತಿನಿಧಿ ರಿಚಾರ್ಡ್ ಜಿ ಒಲ್ಸನ್ ಹೇಳಿದ್ದಾರೆ.
ಅಮೆರಿಕಾ ಮತ್ತು ಪಾಕಿಸ್ಥಾನ ಭಯೋತ್ಪಾದನೆಯ ವಿರುದ್ಧ ಸದಾ ಚರ್ಚೆಗಳನ್ನು ನಡೆಸುತ್ತಿರುತ್ತದೆ. ಪಾಕಿಸ್ಥಾನ ಹಕ್ಕಾಣಿ ನೆಟ್ವರ್ಕ್ ಮತ್ತು ತಾಲಿಬಾನ್ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಉಗ್ರವಾದದಲ್ಲಿ ಒಳ್ಳೆಯದು, ಕೆಟ್ಟದ್ದು ಎಂದು ವರ್ಗೀಕರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.