ಬೆಂಗಳೂರು : ಮಹದಾಯಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಸಿದ್ದರಾಮಯ್ಯ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪರ್ಸೇಕರ್ಗೆ ಪತ್ರ ಬರೆದಿದ್ದು ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗುವಂತೆ ಕೋರಿದ್ದಾರೆ. ಇದಕ್ಕಾಗಿ ರಾಜ್ಯ ಜಲಸಂಪನ್ಮೂಲ ಸಚಿವರ ನೇತ್ರತ್ವದಲ್ಲಿ ನಿಯೋಗ ಕರ್ನಾಟಕದ ನಿಯೋಗ ತಮ್ಮನ್ನು ಭೇಟಿಮಾಡಲಿದೆ.
ಈ ನಿಯೋಗದಲ್ಲಿ ವಿರೋಧ ಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರೂ ಒಳಗೊಂಡಿದ್ದಾರೆ ಎಂದು ಅವರು ಪತ್ರಮುಖೇನ ತಿಳಿಸಿದ್ದಾರೆ. ಫೆ 23 ರಂದು ಮಹದಾಯಿ ನ್ಯಾಯಾಧೀಕರಣದ ವಿಚಾರಣೆ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹೆಜ್ಜೆ ಮಹತ್ವ ಪಡೆದಿದೆ
ಉತ್ತರ ಕರ್ನಾಟಕ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಈ ಸಂಬಂಧ ದೇವೇಗೌಡರು ಮಹದಾಯಿ ಯಿಂದ ನೀರನ್ನು ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿದ್ದರು. ಅಲ್ಲದೇ ನೀರಿನ ಹಂಚಿಕೆ ಸಂಬಂಧಿಸಿದಂತೆ ತೆಲಂಗಾಣ ಖ್ಯಾತೆ ತೆಗೆದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.