ಬೆಂಗಳೂರು : ಎತ್ತಿನಹೊಳೆ ಯೋಜನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪರಿಸರವಾದಿಗಳು ಸಲ್ಲಿಸಿರುವ ಅರ್ಜಿ ಸೋಮವಾರ ಚೆನ್ನೈನ ಹಸಿರು ಪೀಠದಲ್ಲಿ ವಿಚಾರಣೆ ಬರಲಿದೆ.
ಈ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ವಿರೋಧ ವ್ಯಕ್ತವಾಗುತ್ತಿದ್ದು, ಕೇಂದ್ರ ಪರಿಸರ ಇಲಾಖೆಯ ಅನುಮತಿ ಪಡೆಯದೆಯೆ ರಾಜ್ಯ ಸರ್ಕಾರ ಈ ಯೋಜನೆ ರೂಪಿಸಿದೆ ಎಂದು ಆರೋಪಿಸಿ ಪರಿಸರವಾದಿಗಳು ಚೆನ್ನೈನ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಅಲ್ಲದೇ ಡಿ.7 ಕೇಂದ್ರ ಪರಿಸರ ಇಲಾಖೆ ಅನುಮತಿ ಪಡೆದು ಕಾಮಗಾರಿ ಮುಂದುವರೆಸುವುದಾಗಿ ರಾಜ್ಯ ಸರ್ಕಾರ ಹಸಿರು ಪೀಠಕ್ಕೆ ತಿಳಿಸಿತ್ತು.
ಈ ನಡುವೆ ಕೇಂದ್ರ ಅರಣ್ಯ ಮತ್ತು ಪರಿಸರ ಸಮಿತಿಯ ಸದಸ್ಯರು ಸಕಲೇಶಪುರಕ್ಕೆ ಭೇಟಿ ನೀಡಿ ಅಲ್ಲಿ ಎತ್ತಿನಹೊಳೆ ಯೋಜನೆ ಪ್ರಾರಂಭಿಸುವ ಸ್ಥಳವನ್ನು ಡಿ.26 ರಂದು ಪರಿಶೀಲಿಸಲಿದ್ದಾರೆ ಮತ್ತು ಈ ಯೋಜನೆ ಬಗ್ಗೆ ಆ ಪರಿಸರದ ಜನರ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ. ಆ ಬಳಿಕವಷ್ಟೇ ಈ ಯೋಜನೆಗೆ ಅನುಮತಿ ನೀಡುವ ಬಗ್ಗೆ ಯೋಚಿಸಲಾಗುವುದಾಗಿ ಡಿ.18 ರಂದು ನಡೆದ ರಾಜ್ಯ ಸರ್ಕಾರದ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ತಿಳಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.