ಕಲಬುರಗಿ : ಗುಣಮಟ್ಟದ ಶಿಕ್ಷಣದಲ್ಲಿ ಉನ್ನತ ಸಂಸ್ಥೆಗಳು ಯಾಕೆ ಇನ್ನೂ ವಿಶ್ವಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ ಎಂದು ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳ ಕುಲಾಧಿಪತಿಗಳಾಗರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರಶ್ನಿಸಿದ್ದಾರೆ.
ರಾಷ್ಟ್ರವ್ಯಾಪಿ 16 ಐಐಟಿಗಳು, 41 ಕೇಂದ್ರೀಯ ವಿವಿಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರಪಂಚದ 200 ಶ್ರೇಷ್ಠ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಪಡಿಯುವುದು ಯಾವಾಗ ಎಂದು ಅವರು ಕೇಳಿದ್ದಾರೆ.
ಕಲಬುರಗಿಯಲ್ಲಿ ಇಎಸ್ಐಸಿ ಆಸ್ಪತ್ರೆ ಸಂಕೀರ್ಣದ ಸಭಾಂಗಣದಲ್ಲಿ ನಡೆದ ಕರ್ನಾಟಕ ಕೇಂದ್ರೀಯ ವಿವಿ ೨2ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ನಳಂದಾ, ತಕ್ಷಶಿಲಾ, ವಿದ್ಯಾಲಯಗಳೊಂದಿಗೆ ಸಾವಿರಾರು ವರ್ಷಗಳ ಹಿಂದೆ ಭಾರತ ಶಿಕ್ಷಣ ರಂಗದಲ್ಲಿ ವಿಶ್ವಗುರುವಾಗಿ ಮೆರೆದಿತ್ತು. ಆದರೆ ಇಂದಿನ ಶಿಕ್ಷಣದಲ್ಲಿ ನಾವು ಎಲ್ಲಿ ಕೊರತೆಗಳಿವೆ ಸುಧಾರಣೆ ಎಲ್ಲಿ ತರಬೇಕು ಎಂದು ಯೋಚಿಸುವ ಕಾಲಘಟ್ಟ ಸನ್ನಿಹಿತವಾಗಿದೆ ಎಂದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.